ಮೋಹನ್​​ಲಾಲ್​​ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ.

ಮೋಹನ್ ಲಾಲ್ 4 ದಶಕಗಳಿಗೂ ಹೆಚ್ಚು ಕಾಲದ ಅವರ ವೃತ್ತಿಜೀವನದಲ್ಲಿ 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.  ಮಲಯಾಳಂನಲ್ಲಿ ಮಾತ್ರವಲ್ಲದೆ ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿಯೂ ನಟಿಸಿದ್ದಾರೆ.

ಸೆಪ್ಟೆಂಬರ್ 23ರಂದು ನಡೆಯುವ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೋಹನ್ ಲಾಲ್ ಅವರಿಗೆ  ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಲಾಗುವುದು. ಕಳೆದ ವರ್ಷ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.

5 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಮತ್ತು ಪದ್ಮಭೂಷಣವನ್ನು ಮೋಹನ್ ಲಾಲ್ ಪಡೆದಿದ್ದಾರೆ.  ಮೋಹನ್ ಲಾಲ್ ಅವರಿಗೆ 2023ರ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ  ಪ್ರಕಟಿಸಿದೆ. ಇದನ್ನು ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವೆಂದು ಪರಿಗಣಿಸಲಾಗಿದೆ.

ಮೋಹನ್ ಲಾಲ್ ಅವರು ಶ್ರೇಷ್ಠತೆ ಮತ್ತು ಬಹುಮುಖ ಪ್ರತಿಭೆಯ ಪ್ರತೀಕ. ದಶಕಗಳ ಕಾಲದ ಶ್ರೀಮಂತ ಕಾರ್ಯವೈಖರಿಯೊಂದಿಗೆ ಅವರು ಮಲಯಾಳಂ ಸಿನಿಮಾ, ರಂಗಭೂಮಿಯ ಪ್ರಮುಖ ಜ್ಯೋತಿಯಾಗಿ ನಿಂತಿದ್ದಾರೆ. ಕೇರಳದ ಸಂಸ್ಕೃತಿಯ ಬಗ್ಗೆ ತೀವ್ರ ಒಲವು ಹೊಂದಿದ್ದಾರೆ. ಅವರು ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಚಲನಚಿತ್ರಗಳಲ್ಲಿಯೂ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಮಾಧ್ಯಮಗಳಲ್ಲಿ ಅವರ ಸಿನಿಮೀಯ ಮತ್ತು ರಂಗಭೂಮಿ ಪ್ರತಿಭೆ ನಿಜಕ್ಕೂ ಸ್ಪೂರ್ತಿದಾಯಕವಾಗಿದೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರ ಸಾಧನೆಗಳು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಲಿ ಎಂದು ನರೇಂದ್ರ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!