Dare devil mustafa: ʼʼಡೇರ್ ಡವಿಲ್ ಮುಸ್ತಾಫಾ” ಪ್ರೀಮಿಯರ್ ಶೋ ಟಿಕೆಟ್ ಬೆಲೆ ಇಷ್ಟೇ!

“ಡೇರ್ ಡವಿಲ್ ಮುಸ್ತಾಫಾ” ತೆರೆ ಕಾಣಲು ಕೇವಲ ಒಂದು ದಿನವಷ್ಟೇ ಬಾಕಿ ಇದ್ದು, ಚಿತ್ರತಂಡ ಮೈಸೂರು, ಬೆಂಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಪ್ರೀಮಿಯರ್ ಶೋ ಏರ್ಪಡಿಸಿದೆ. ಕೇವಲ ಒಂದು ರೂಪಾಯಿಗೆ ಶೋ ಆಯೋಜಿಸಲಾಗಿದೆ.

ಶಿವಮೊಗ್ಗದಲ್ಲಿ ಟಿಕೆಟ್ ಬುಕ್ಕಿಂಗ್‌ ಆರಂಭ ಆದ ಕೆಲ ನಿಮಿಷಗಳಲ್ಲಿ ಟಿಕೆಟ್ ಸೋಲ್ಡ್ ಔಟ್ ಆಗಿದೆ. ಪೂರ್ಣಚಂದ್ರ ತೇಜಸ್ವಿಯವರ ಕಥೆಯನ್ನು ಸಿನಿಮಾಪ್ರೇಮಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕೇವಲ 1ರೂಪಾಯಿಗೆ ಚಿತ್ರತಂಡ ಪ್ರೀಮಿಯರ್ ಶೋ ಆಯೋಜಿಸಲಾಗಿದೆ ಎಂದು ಚಿತ್ರತಂಡ ಹೇಳಿದೆ.

ಸಿನಿಮಾಗೆ ಶಶಾಂಕ್ ಸೋಗಾಲ್ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳಿಂದಲೇ ನಿರ್ಮಿಸಿರುವ ಈ ಚಿತ್ರವನ್ನು ಡಾಲಿ ಧನಂಜಯ್ ತಮ್ಮ ಡಾಲಿ ಪಿಕ್ಚರ್ಸ್ ನಡಿ ಅರ್ಪಿಸುತ್ತಿದ್ದಾರೆ. ಕೆ ಆರ್ ಜಿ ಸ್ಟುಡಿಯೊಸ್ ರಾಜ್ಯದಲ್ಲಿ ಚಿತ್ರವನ್ನು ವಿತರಿಸುತ್ತಿದೆ.

ಶಿಶಿರ್‌ ಬೈಕಾಡಿ, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌, ಮಂಡ್ಯ ರಮೇಶ್‌, ಮೈಸೂರ್‌ ಆನಂದ್‌, ಸುಂದರ್‌ ವೀಣಾ, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು ಸೇರಿದಂತೆ ಅನೇಕ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಚಿತ್ರಕ್ಕೆ ರಾಹುಲ್‌ ರಾಯ್‌ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ ನವನೀತ್‌ ಶ್ಯಾಮ್‌ ಸಂಗೀತವಿದೆ. ಸಿನಿಮಾಮರ ಬ್ಯಾನರ್‌ನಲ್ಲಿ ಡೇರ್ ಡೆವಿಲ್ ಮುಸ್ತಫಾ ಚಿತ್ರ ನಿರ್ಮಾಣವಾಗಿದೆ.
—-

Be the first to comment

Leave a Reply

Your email address will not be published. Required fields are marked *

Translate »
error: Content is protected !!