ನಿರ್ದೇಶಕ ಶಶಾಂಕ್ ಮತ್ತು ನಟ ಡಾರ್ಲಿಂಗ್ ಕೃಷ್ಣ ಅವರು ಹೊಸ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.
ಫಾದರ್ ಚಿತ್ರದ ಚಿತ್ರೀಕರಣ ಪೂರ್ಣಗೊಂಡ ಬೆನ್ನಲ್ಲೇ ಡಾರ್ಲಿಂಗ್ ಕೃಷ್ಣ ಅವರು ಶಶಾಂಕ್ ನಿರ್ದೇಶನದ ಹೊಸ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಚಿತ್ರದ ಮೊದಲ ಹಂತದ ಚಿತ್ರೀಕರಣ ಆರಂಭವಾಗಿದ್ದು, ಬ್ರ್ಯಾಟ್ ಎಂದು ಟೈಟಲ್ ಫಿಕ್ಸ್ ಮಾಡಲಾಗಿದೆ ಎಂದು ಹೇಳಲಾಗಿದೆ.
ಚಿತ್ರದ ತಾರಾಗಣ ಹಾಗೂ ಸಿಬ್ಬಂದಿಗಳ ಕುರಿತು ಮಾಹಿತಿಗಳನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಆದರೆ ಶಶಾಂಕ್ ಅವರೊಂದಿಗೆ ಚಿತ್ರ ಮಾಡುತ್ತಿರುವ ಕುರಿತು ಡಾರ್ಲಿಂಗ್ ಕೃಷ್ಣ ದೃಢಪಡಿಸಿದ್ದಾರೆ.
ಪ್ರೀತಿ ಹಾಗೂ ಕೌಟುಂಬಿಕ ಚಿತ್ರಗಳನ್ನು ನೀಡಿರುವ ಶಶಾಂಕ್ ಈ ಬಾರಿ ಥ್ರಿಲ್ಲರ್ ಚಿತ್ರವೊಂದನ್ನು ಪ್ರೇಕ್ಷಕರ ಮುಂದೆ ತರುತ್ತಿದ್ದಾರೆ.
ಆರ್ ಚಂದ್ರು, ಆರ್ ಸಿ ಸ್ಟುಡಿಯೋಸ್ ಮೂಲಕ ಮೊದಲ ಚಿತ್ರವಾಗಿ ‘ಫಾದರ್’ ಚಿತ್ರ ಆರಂಭಿಸಿದ್ದಾರೆ. ಶಿವಣ್ಣ ಅವರ ‘ಭೈರಾಗಿ’ ಚಿತ್ರಕ್ಕೆ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದ ರಾಜ್ ಮೋಹನ್ ಈ ಚಿತ್ರದ ನಿರ್ದೇಶಕ. ಡಾರ್ಲಿಂಗ್ ಕೃಷ್ಣ ನಾಯಕ, ಅಮೃತ ಅಯ್ಯಂಗಾರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಪ್ರಕಾಶ್ ರೈ, ಸುನೀಲ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಮುಂಬೈನ ಆನಂದ್ ಪಂಡಿತ್ ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ‘ಹನುಮಾನ್’ ಚಿತ್ರದ ಖ್ಯಾತಿಯ ಹರಿ ಸಂಗೀತ ನೀಡುತ್ತಿದ್ದಾರೆ.
Be the first to comment