ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಅವರು ‘ಕ್ರಾಂತಿ’ ಚಿತ್ರದ ನಂತರ ಯಾವ ಚಿತ್ರದ ಮೂಲಕ ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಬಹಿರಂಗವಾಗಿದೆ.
ದರ್ಶನ್ ‘ಗರಡಿ’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರದಲ್ಲಿ ದರ್ಶನ್ ಕುಸ್ತಿ ಪಟು ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಚರ್ಚೆ ಶುರುವಾಗಿದೆ. ಪೈಲ್ವಾನ್ ರೂಪದಲ್ಲಿ ದರ್ಶನ್ ಚಿತ್ರದಲ್ಲಿ ಕಾಣಿಸಿಕೊಳ್ಳಬಹುದು ಎನ್ನಲಾಗಿದ್ದು ಇದಕ್ಕೆ ಚಿತ್ರತಂಡವೇ ಉತ್ತರ ಕೊಡಬೇಕಿದೆ.
‘ಗರಡಿ’ ಚಿತ್ರದ ಲಾಂಚ್ ಟೈಮ್ ನಿಂದ ದರ್ಶನ್ ಚಿತ್ರತಂಡದ ಜೊತೆಗೆ ಇದ್ದಾರೆ. ಕೆಲ ದಿನಗಳ ಹಿಂದೆ ಸಿನಿಮಾ ಶೂಟಿಂಗ್ ನೋಡಲು ದರ್ಶನ್ ಶೂಟಿಂಗ್ ಸ್ಪಾಟ್ಗೆ ಭೇಟಿ ನೀಡಿದ್ದರು. ನಿರ್ದೇಶಕ ಯೋಗರಾಜ್ ಭಟ್, ನಿರ್ಮಾಪಕ ಬಿ ಸಿ ಪಾಟೀಲ್ ಹಾಗೂ ನಾಯಕ ನಟ ಯಶಸ್ ಸೂರ್ಯ ಜೊತೆ ಕೆಲ ಕಾಲ ಮಾತುಕತೆ ನಡೆಸಿದ ದರ್ಶನ್ ಶೂಟಿಂಗ್ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು.
ಈ ಹಿಂದೆ ಕೆಲ ಚಿತ್ರಗಳಲ್ಲಿ ದರ್ಶನ್ ಅತಿಥಿ ಪಾತ್ರ ಮಾಡಿದ್ದರು. ಪುನೀತ್ ರಾಜ್ಕುಮಾರ್ ಅಭಿನಯದ ‘ಅರಸು’, ‘ಚೌಕ’, ಪ್ರಜ್ವಲ್ ದೇವರಾಜ್ ಅಭಿನಯದ ‘ಇನ್ಸ್ಪೆಕ್ಟರ್ ವಿಕ್ರಂ’ ಚಿತ್ರಗಳಲ್ಲಿ ದರ್ಶನ್ ಅಥಿತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅದೆಲ್ಲವೂ ದೊಡ್ಡ ತಿರುವು ಕೊಡುವ ಪಾತ್ರಗಳೇ ಆಗಿದ್ದವು. ಈಗ ‘ಗರಡಿ’ಯಲ್ಲಿ ದರ್ಶನ್ ಹೇಗೆ ಕಾಣಿಸಿಕೊಳ್ಳುತ್ತಾರೆ ಎನ್ನುವ ಕುತೂಹಲ ಉಂಟಾಗಿದೆ.
ರಾಬರ್ಟ್’ ಚಿತ್ರದ ನಂತರ ದರ್ಶನ್ ‘ಕ್ರಾಂತಿ’ ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ‘ಯಜಮಾನ’ ಚಿತ್ರ ತಂಡದ ಚಿತ್ರವಾದ ‘ಕ್ರಾಂತಿ’ ಜೊತೆಗೆ ದರ್ಶನ್ ಮತ್ತೊಮ್ಮೆ ಕೈ ಜೋಡಿಸಿದ್ದಾರೆ. ಚಿತ್ರದಲ್ಲಿ ದರ್ಶನ್ ಜೊತೆಗೆ ರಚಿತಾ ರಾಮ್ ಜೋಡಿ ಆಗಿ ನಟಿಸಿದ್ದಾರೆ.
___

Be the first to comment