ಸೋದರಳಿಯ ಚಂದು ಚಿತ್ರದಲ್ಲಿ ದರ್ಶನ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು ಎಂಬ ಬ್ರೇಕಿಂಗ್ ನ್ಯೂಸ್ ಹೊರ ಬಿದ್ದಿದೆ.
ಈ ಚಿತ್ರವನ್ನು ದಿನಕರ್ ತುಗದೀಪ್ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾ ಯಾರು ನಿರ್ಮಾಣ ಮಾಡುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ದರ್ಶನ್ ಅವರು ಈ ಚಿತ್ರದಲ್ಲಿ ವಿಲನ್ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ.
ದರ್ಶನ್ ಅವರು ಚಂದು ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಪ್ರತಿ ಹಂತದಲ್ಲಿ ಚಂದು ಬೆಂಬಲಿಸುತ್ತಾ ಬರುತ್ತಿದ್ದಾರೆ. ಅನೇಕ ಬಾರಿ ಚಂದು, ದರ್ಶನ್ ಜೊತೆ ಕಾಣಿಸಿಕೊಂಡಿದ್ದಾರೆ. ಚಂದು ಅವರು ಮಂಡ್ಯ ರಮೇಶ್ ಅವರ ‘ನಟನಾ ರಂಗಶಾಲೆ’ಯಲ್ಲಿ ತರಬೇತಿ ಪಡೆದಿದ್ದಾರೆ. ‘ರಾಬರ್ಟ್’ ಹಾಗೂ ‘ಕಾಟೇರ’ ಚಿತ್ರದ ನಿರ್ದೇಶನದ ಡಿಪಾರ್ಟ್ಮೆಂಟ್ನಲ್ಲಿ ಕೆಲಸ ಮಾಡಿದ್ದಾರೆ.
ಈ ಮೊದಲು ಡೆವಿಲ್ ಸಿನಿಮಾದಲ್ಲೇ ಚಂದು ನಟಿಸಬೇಕಿತ್ತು. ಆದರೆ ಅವರನ್ನು ಸಿನಿಮಾದಿಂದ ಹೊರಗಿಡಲಾಗಿತ್ತು. ‘ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ. ಆದ್ದರಿಂದ ಡೆವಿಲ್ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಬೇಕಿದ್ದ ಚಂದುನನ್ನು ಈ ಚಿತ್ರದಿಂದ ಹೊರಗಿಡಲಾಗಿದೆ’ ಎಂದಿದ್ದರು ದರ್ಶನ್.
—-





Be the first to comment