ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಲಾಗಿದೆ.
ಬೆಂಗಳೂರು ಪೊಲೀಸರು ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ರಾಜ್ಯದ ಪರವಾಗಿ ವಕೀಲ ಸಿದ್ಧಾರ್ಥ್ ಲೂಥ್ರಾ ಅವರು ಅರ್ಜಿಯ ಉಲ್ಲೇಖ ಮಾಡಿದರು. ನ್ಯಾಯಮೂರ್ತಿಗಳು ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದರು.
ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಡಿ.13 ರಂದು ದರ್ಶನ್ ಮತ್ತು ಪ್ರಮುಖ ಆರೋಪಿ ಪವಿತ್ರ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.
ಕಳೆದ ವರ್ಷ ಜೂನ್9 ರಂದು ಚಿತ್ರದುರ್ಗದ ರೇಣುಕಾ ಸ್ವಾಮಿಯ ಕೊಲೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 11 ರಂದು ಪೊಲೀಸರು ದರ್ಶನ್, ಪವಿತ್ರಾ ಗೌಡ ಸೇರಿದಂತೆ ಕೆಲವರನ್ನು ಬಂಧಿಸಿದ್ದರು. ದರ್ಶನ್ 131 ದಿನಗಳ ಜೈಲುವಾಸದ ನಂತರ ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಅ.30 ರಂದು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಡೆವಿಲ್ ಸಿನಿಮಾದ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದರು. ಕಳೆದ ಒಂದು ವಾರದಿಂದ ರಾಜಸ್ಥಾನದಲ್ಲಿ ಚಿತ್ರೀಕರಣ ನಡೆಸಲಾಗುತ್ತಿತ್ತು.
—-

Be the first to comment