darshan: ದರ್ಶನ್ ಹೊಸ ಚಿತ್ರದ ಟೈಟಲ್ ರಿವೀಲ್

ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬವಾಗಿದ್ದು, ದರ್ಶನ್ ಅವರ 56ನೇ ಚಿತ್ರದ ಶೀರ್ಷಿಕೆಯೂ ಈಗ ಹೊರ ಬಿದ್ದಿದೆ..

ಹೊಸ ಚಿತ್ರಕ್ಕೆ ‘ಕಾಟೇರ’ ಎಂದು ಟೈಟಲ್ ಇಡಲಾಗಿದ್ದು, ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರವನ್ನು ತರುಣ್ ಸುಧೀರ್ ನಿರ್ದೇಶಿಸುತ್ತಿದ್ದಾರೆ.

ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ನೀಡಿದರೆ, ಸುಧಾಕರ್ ಎಸ್. ರಾಜ್ ಅವರ ಛಾಯಾಗ್ರಹಣ, ಕೆ.ಎಂ ಪ್ರಕಾಶ್ ಅವರ ಸಂಕಲನ, ಚಿತ್ರಕಥೆಯ ಜವಾಬ್ದಾರಿ ತರುಣ್ ಸುಧೀರ್ ಮತ್ತು ಜಡೇಶ್ ಕುಮಾರ್ ಹಂಪಿ ಅವರದ್ದು. ಮಾಸ್ತಿ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ.

ಈ ಚಿತ್ರದಲ್ಲಿ ನಾಯಕಿಯಾಗಿ ಮಾಲಾಶ್ರೀ ಮಗಳು ರಾಧನಾ ರಾಮ್ ಕನ್ನಡಕ್ಕೆ ಪರಿಚಿತಗೊಳ್ಳುತ್ತಿದ್ದಾರೆ. ಚೌಕ ಮತ್ತು ರಾಬರ್ಟ್ ನಂತರ ತರುಣ್ ಸುಧೀರ್ ಮತ್ತು ದರ್ಶನ್ ಮೂರನೇ ಬಾರಿಗೆ ಒಂದಾಗುತ್ತಿದ್ದಾರೆ. ಫೆಬ್ರವರಿ 22 ರಿಂದ ಶೂಟಿಂಗ್ ಆರಂಭವಾಗಲಿದೆ.

ಈ ಹಿಂದೆ ತರುಣ್ ಸುಧೀರ್ ಹಾಗೂ ದರ್ಶನ್ ಕಾಂಬಿನೇಷನಲ್ಲಿ ಮೂಡಿಬಂದಿದ್ದ ‘ರಾಬರ್ಟ್’ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಈಗ ಇದೇ ಜೋಡಿಯ ಹೊಸ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ.

ಕೋವಿಡ್ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಈ ಹಿಂದೆ ದರ್ಶನ್ ಅವರು ಹುಟ್ಟುಹಬ್ಬ ಆಚರಿಸಿಕೊಂಡಿಲ್ಲ. ಈ ಬಾರಿ ಅಭಿಮಾನಿಗಳ ಪ್ರೀತಿಗೆ ಮಣಿದು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ.

ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಅವರ ನಿವಾಸಕ್ಕೆ ಚಿತ್ರರಂಗದ ಗಣ್ಯರು, ಸ್ನೇಹಿತರು ಹಾಗೂ ಅಭಿಮಾನಿಗಳು ಆಗಮಿಸಿ ಶುಭ ಕೋರುತ್ತಿದ್ದಾರೆ.

__

Be the first to comment

Leave a Reply

Your email address will not be published. Required fields are marked *

Translate »
error: Content is protected !!