ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು!

ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರಾಗಿದೆ.

ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದಾರೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ವಾದ-ಪ್ರತಿವಾದವನ್ನು ಆಲಿಸಿ ಜಾಮೀನು ಮಂಜೂರು ಮಾಡಿದೆ.

ದರ್ಶನ್ ಬೆನ್ನು ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ಸೆಷನ್ಸ್ ಕೋರ್ಟ್‌ ಮೊರೆ ಹೋಗಿದ್ದರು. ಆದರೆ ಜಾಮೀನು ತಿರಸ್ಕೃತಗೊಂಡ ಪರಿಣಾಮ ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲ ಸಿ.ವಿ ನಾಗೇಶ್, ದರ್ಶನ್ ನೋವು ಉಲ್ಲೇಖಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಇಲ್ಲವಾದಲ್ಲಿ ದರ್ಶನ್ ಒಂದು ಕಾಲಿಗೆ ಆಗಿರುವ ಸಮಸ್ಯೆ ಎರಡೂ ಕಾಲಿಗೆ ಆಗಬಹುದು. ಹೀಗಾಗಿ 3 ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದರು.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೂನ್ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಈ ಪ್ರಕರಣಕ್ಕೆ ಸಂಬಂಧಿಸಿ ಒಟ್ಟೂ 17 ಜನರನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ದರ್ಶನ್ ಅವರು ಎ2 ಆರೋಪಿ ಆದರೆ, ಪವಿತ್ರಾ ಗೌಡ ಅವರು ಎ1 ಆರೋಪಿ ಎನಿಸಿಕೊಂಡಿದ್ದಾರೆ.

ದರ್ಶನ್ ಅವರನ್ನು ಆರಂಭದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಇಡಲಾಗಿತ್ತು. ಅವರು ಅಲ್ಲಿ ಐಷಾರಾಮಿ ಸವಲತ್ತು ಪಡೆದ ಆರೋಪದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆದರು.

Be the first to comment

Leave a Reply

Your email address will not be published. Required fields are marked *

Translate »
error: Content is protected !!