ಕ್ರಾಂತಿ ಸಿನಿಮಾಕ್ಕೆ ಅಭಿಮಾನಿಗಳಿಂದ ನನಗೆ ಸಿಗುತ್ತಿರುವ ಬೆಂಬಲ ವಿವರಿಸಲು ಪದಗಳೇ ಸಿಗುತ್ತಿಲ್ಲ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.
ನಾನು ಮಾಸ್ ಪ್ರೇಕ್ಷಕರನ್ನು ರಂಜಿಸಲು ಪ್ರಯತ್ನಿಸುತ್ತೇನೆ. ಅದೇ ರೀತಿ ಸಾಮಾಜಿಕ ಸಂದೇಶವನ್ನು ಹೊಂದಿರುವ ಚಲನಚಿತ್ರಗಳನ್ನು ಮಾಡುವ ಉದ್ದೇಶ ಹೊಂದಿದ್ದೇನೆ. ಇಂದಿನ ಸರ್ಕಾರಿ ಶಾಲೆಗಳ ದುಃಸ್ಥಿತಿ ಬಗ್ಗೆ ಚಿತ್ರ ಬೆಳಕು ಚೆಲ್ಲಲಿದೆ. ಹೆಚ್ಚುತ್ತಿರುವ ಶಿಕ್ಷಣದ ಬೆಲೆ ಮತ್ತು ಖಾಸಗಿ ಸಂಸ್ಥೆಗಳು ಪಡೆಯುವಷ್ಟು ಫಲಿತಾಂಶವನ್ನು ಸರ್ಕಾರಿ ಶಾಲೆಗಳು ಏಕೆ ಪಡೆಯುತ್ತಿಲ್ಲ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗುತ್ತಿದೆ ಎಂದು ದರ್ಶನ್ ತಿಳಿಸಿದ್ದಾರೆ.
ಕ್ರಾಂತಿ ಚಿತ್ರದ ಡಬ್ಬಿಂಗ್ ಮುಗಿಸಿರುವ ದರ್ಶನ್, ಚಿತ್ರ ಪ್ರೇಕ್ಷಕರ ನಿರೀಕ್ಷೆಯನ್ನು ಪೂರೈಸುತ್ತದೆ ಎಂದು ಹೇಳಿದ್ದಾರೆ.
‘ಯಜಮಾನ ನಂತರ ಮೀಡಿಯಾ ಹೌಸ್ ಸ್ಟುಡಿಯೋಸ್ ಮತ್ತು ವಿ ಹರಿಕೃಷ್ಣ ಜೊತೆಗಿನ ಎರಡನೇ ಸಿನಿಮಾವಾಗಿರುವ ಕ್ರಾಂತಿ ಬಿಡುಗಡೆ ಕುರಿತು ಮುಂದಿನ ಮೂರು ವಾರಗಳಲ್ಲಿ ಅಧಿಕೃತವಾಗಿ ಮಾಹಿತಿ ಪ್ರಕಟವಾಗಲಿದೆ ಎಂದು ದರ್ಶನ್ ತಿಳಿಸಿದ್ದಾರೆ.
‘ಒಂಟಿಯಾಗಿ ಹೋರಾಡಲು ಕಲಿಯಿರಿ’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಬರುತ್ತಿರುವ ಪ್ಯಾನ್-ಇಂಡಿಯಾ ಚಲನಚಿತ್ರವನ್ನು ಬಹು ಭಾಷೆಗಳಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತದೆ. ವಿ. ಹರಿಕೃಷ್ಣ ನಿರ್ದೇಶನದ, ಶೈಲಜಾ ನಾಗ್ ಹಾಗೂ ಬಿ. ಸುರೇಶ್ ನಿರ್ಮಾಣದ ದರ್ಶನ್ ಅವರ ಮುಂದಿನ ‘ಕ್ರಾಂತಿ’ ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ಆರಂಭವಾಗಿದೆ. ಕ್ರಾಂತಿ ಚಿತ್ರದ ಪ್ರಚಾರವನ್ನು ದರ್ಶನ್ ಅಭಿಮಾನಿಗಳೇ ದೊಡ್ಡ ಮಟ್ಟದಲ್ಲಿ ಮಾಡುತ್ತಿದ್ದಾರೆ.
____

Be the first to comment