ರೇಣುಕಾಸ್ವಾಮಿ ಕೇಸ್ನಲ್ಲಿ ನಟ ದರ್ಶನ್ ಗೆ ಭೀತಿ ಎದುರಾಗಿದೆ. ದರ್ಶನ್ ಜಾಮೀನು ಅರ್ಜಿ ಪ್ರಶ್ನಿಸಿ ಪೊಲೀಸರ ಮೇಲ್ಮನವಿ ಅರ್ಜಿ ಜನವರಿ 24ರಂದು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ.
ಜೂನ್ 11ರಂದು ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದರು. ಬಳಿಕ ಹಲವು ತಿಂಗಳು ಜೈಲಿನಲ್ಲಿ ಇದ್ದರು. ಬಳಿಕ ಹೈಕೋರ್ಟ್ನಲ್ಲಿ ಅನಾರೋಗ್ಯದ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದ ಅವರು ನಂತರ ಜಾಮೀನು ಪಡೆದುಕೊಂಡರು. ಸುಪ್ರೀಂನಲ್ಲಿ ಜಾಮೀನು ರದ್ದಾದರೆ ದರ್ಶನ್ ಮತ್ತೆ ಜೈಲು ಸೇರಬೇಕಾಗುತ್ತದೆ.
ದರ್ಶನ್ ಜೊತೆ ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್, ಪ್ರದೋಶ್ ಜಾಮೀನು ಪಡೆದಿದ್ದಾರೆ. ಇದನ್ನು ಸುಪ್ರೀಂನಲ್ಲಿ ಪ್ರಶ್ನಿಸಲಾಗಿದೆ. ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಜನವರಿ 6ರಂದು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಸುಪ್ರೀಂಕೋರ್ಟ್ನಲ್ಲಿ ಜ.24ರಂದು ಅರ್ಜಿ ವಿಚಾರಣೆ ನಡೆಸಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರ ಬಂದಿರುವ ದರ್ಶನ್ ಫೆಬ್ರವರಿಯಲ್ಲಿ “ಡೆವಿಲ್” ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ದರ್ಶನ್ ಇಲ್ಲಿಯವರೆಗೆ ಚಿತ್ರೀಕರಣಗೊಂಡ ‘ಡೆವಿಲ್’ ಚಿತ್ರದ ತಮ್ಮ ಭಾಗಕ್ಕೆ ಡಬ್ಬಿಂಗ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
Be the first to comment