ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೊಟ್ಟಿಗೆ ಕೆಲಸಮಾಡಿದ ಮೇಕಪ್ ಆರ್ಟಿಸ್ಟ್ ಹೊನ್ನೆ ಗೌಡ್ರು ನಿನ್ನೆ ನಿಧನರಾಗಿದ್ದಾರೆ.
ಮೆಜೆಸ್ಟಿಕ್ ಚಿತ್ರದ ಮೂಲಕ ನಾಯಕ ನಟನಾಗಿ ಪಾದಾರ್ಪಣೆ ಮಾಡಿದ ದರ್ಶನ್ ಇಲ್ಲಿವರೆಗೂ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ಕೊಟ್ಟಿದ್ದಾರೆ. ದರ್ಶನ್ ಅವರು ತೆರೆಮೇಲೆ ಚೆನ್ನಾಗಿ ಕಾಣಲು ಕಾರಣ ಅವರ ಮೇಕಪ್ ಆರ್ಟಿಸ್ಟ್ ಹೊನ್ನೆ ಗೌಡ್ರು.
ನಟ ದರ್ಶನ್ ಹೊನ್ನೆ ಗೌಡ್ರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ದರ್ಶನ್, ಹೊನ್ನೆ ಗೌಡ್ರು ಜೊತೆಗಿನ ಫೋಟೋ ಹಂಚಿಕೊಂಡು, ’25 ವರ್ಷಗಳಿಂದ ನನ್ನೊಂದಿಗೆ ಕೆಲಸಮಾಡಿದ ಪ್ರಿಯ ಮೇಕಪ್ ಆರ್ಟಿಸ್ಟ್ ಹೊನ್ನೆ ಗೌಡ್ರು ಅಗಲಿದ ಸುದ್ಧಿ ನಮ್ಮೆಲ್ಲರನ್ನು ಶೋಕದಲ್ಲಿ ಮುಳುಗಿಸಿದೆ. ಅವರ ಕಲೆ, ನಿಷ್ಠೆ ಮತ್ತು ನಗುಮೊಗದ ಸೇವೆಯನ್ನು ಎಂದಿಗೂ ಮರೆಯಲಾಗದು.ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬಕ್ಕೆ ನೋವನ್ನು ನುಂಗುವ ಶಕ್ತಿ ನೀಡಲಿ. ಹೊನ್ನೆ ಗೌಡರ ಆತ್ಮಕ್ಕೆ ಶಾಂತಿ ದೊರೆಯಲಿ. ಓಂ ಶಾಂತಿ’ ಎಂದು ಟ್ವೀಟ್ ಮಾಡಿದ್ದಾರೆ.
ದರ್ಶನ್ ಬಣ್ಣ ಹಚ್ಚಿ ಬರೋಬ್ಬರಿ 25 ವರ್ಷ ಕಳೆದಿದೆ. ದರ್ಶನ್ ತೆರೆಯ ಮುಂದೆ ಸುಂದರವಾಗಿ ಕಾಣಲು ಕಾರಣರಾದ ಮೇಕಪ್ ಆರ್ಟಿಸ್ಟ್ ಹೊನ್ನೆ ಗೌಡ್ರು ಇನ್ನಿಲ್ಲ ಎನ್ನುವುದು ದರ್ಶನ್ ಅಭಿಮಾನಿಗಳಿಗೆ ಬೇಸರ ತರಿಸಿದೆ.
—-

Be the first to comment