ದರ್ಶನ್‌ಗೆ ರಿಲೀಫ್!

ರೇಣುಕಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್  ಸೇರಿದಂತೆ ಇತರ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 14ಕ್ಕೆ ಮುಂದೂಡಿದ್ದು ದರ್ಶನ್‌ ಗೆ  ರಿಲೀಫ್‌ ಸಿಕ್ಕಿದೆ.

ಬೆಂಗಳೂರು ನಗರ ಪೊಲೀಸರು ಹೈಕೋರ್ಟ್‌ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಇಂದು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮಹದೇವನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿತು.  ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಮೇ 14ಕ್ಕೆ ಮುಂದೂಡಿತು.

ಡಿಸೆಂಬರ್‌ 13ರಂದು ಕರ್ನಾಟಕ ಹೈಕೋರ್ಟ್ ದರ್ಶನ್, ಪವಿತ್ರಗೌಡ, ಪ್ರದೂಶ್, ಜಗದೀಶ್, ಲಕ್ಷ್ಮಣ್, ಅನುಕುಮಾರ್ ಹಾಗೂ ನಾಗರಾಜುಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಈ ಹಿಂದೆ ಏಪ್ರಿಲ್‌ 2ರಂದು ವಿಚಾರಣೆ ನಡೆಸಿದ್ದ ನ್ಯಾಯಪೀಠ ಏಪ್ರಿಲ್‌ 22ಕ್ಕೆ ವಿಚಾರಣೆಯನ್ನು ಮುಂದೂಡಿತ್ತು.

ಕೊಲೆ ಪ್ರಕರಣ ಸಂಬಂಧ ದರ್ಶನ್‌ ತೂಗುದೀಪ, ಇತರ ಆರೋಪಿಗಳಿಗೆ 21 ದಿನ ರಿಲೀಫ್‌ ಸಿಕ್ಕಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!