ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಲ್ಲ!

ಕೊಲೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ವಿಚಾರಣೆಯಲ್ಲಿರುವ ನಟ ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ ಪಾಟೀಲ್, ರೇಣುಕಾಸ್ವಾಮಿ ಹತ್ಯೆ ಪ್ರಕರಣ ತನಿಖೆ ಪಾರದರ್ಶಕವಾಗಿ ನಡೆಸಲಾಗುತ್ತಿದೆ. ದರ್ಶನ್‍ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಆರೋಪಿ ಆರೋಪಿಯೇ. ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತದೆ.  ಆರೋಪ ಎದುರಿಸುತ್ತಿರುವಾಗ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದಿದ್ದಾರೆ.

ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಹಾಗೂ ಫೋಟೋ ಕಳುಹಿಸಿದ್ದ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ  ಕೊಲೆ ಮಾಡಲಾಗಿತ್ತು. ಕೊಲೆಯ ಬಳಿಕ ರೇಣುಕಾಸ್ವಾಮಿ ಶವವನ್ನು ಮೋರಿಯಲ್ಲಿ ಎಸೆದು ಹೋಗಲಾಗಿತ್ತು.  ಪ್ರಕರಣ ಸಂಬಂಧ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿ 18 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!