ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಸುಪ್ರೀಮ್ ಕೋರ್ಟ್ ಜಾಮೀನು ನಿರಾಕರಿಸಿದೆ.
ಜಾಮೀನು ಅರ್ಜಿ ವಿಚಾರಣೆ ಮಾಡಿದ ಕೋರ್ಟ್ ವಿಚಾರಣೆ ಪೂರ್ಣಗೊಳಿಸಲು 1 ವರ್ಷದ ಗಡುವು ನೀಡಿ ಆ ಬಳಿಕ ಜಾಮೀನು ಬಗ್ಗೆ ಪರಿಶೀಲನೆ ಮಾಡುವುದಾಗಿ ತಿಳಿಸಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ದರ್ಶನ್, ಜಾಮೀನು ಸಿಗದಿರುವ ವಿಚಾರ ತಿಳಿದು ಬೇಸರ ವ್ಯಕ್ತಪಡಿಸಿದ್ದಾರೆ.
ನ್ಯಾಯಮೂರ್ತಿ ಪರ್ದೀವಾಲಾ ಅವರಿದ್ದ ಪೀಠ, ಪ್ರಕರಣದ ಗಂಭೀರತೆ ಪರಿಗಣಿಸಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಈ ಪ್ರಕರಣದಲ್ಲಿ ಒಟ್ಟು 272 ಸಾಕ್ಷಿಗಳಿದ್ದು, ಕಳೆದ 7 ತಿಂಗಳಲ್ಲಿ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿರುವುದನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.
ಈ ಕಾರಣದಿಂದ ಪ್ರತಿದಿನ ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿ 2027ರ ಮೇ 15ರೊಳಗೆ ಸಂಪೂರ್ಣ ವಿಚಾರಣೆ ಮುಗಿಸಬೇಕೆಂದು ಕೋರ್ಟ್ ಆದೇಶಿಸಿದೆ.
ಜೈಲಿನಲ್ಲಿ ದರ್ಶನ್‌ಗೆ ಕನಿಷ್ಠ ಮೂಲ ಸವಲತ್ತುಗಳನ್ನು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.
ಜಾಮೀನು ನಡೆದಿದ್ದಲ್ಲಿ ಸಿನಿಮಾ ವೃತ್ತಿ ಜೀವನಕ್ಕೆ ಹಿನ್ನಡೆಯಾಗುತ್ತದೆ. ಜೀವನೋಪಾಯಕ್ಕೆ ಕಷ್ಟವಾಗುತ್ತದೆ ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದರು. ಆದರೆ ಸುಪ್ರೀಂ ಕೋರ್ಟ್ ಇದಕ್ಕೆ ಕೇರ್ ಅಂದಿಲ್ಲ.
ದರ್ಶನ್ ಅವರ ಜಾಮೀನು ಅರ್ಜಿ ತಿರಸ್ಕೃತ ಆಗಿರುವ ಕಾರಣದಿಂದ ಬಂಡವಾಳ ಹೂಡಿರುವ ನಿರ್ಮಾಪಕರು 2028 ರವರೆಗೂ ಸಿನಿಮಾಗೆ ಕಾಯಬೇಕಾದ ಪರಿಸ್ಥಿತಿ ಉಂಟಾಗಿದೆ.





Be the first to comment