ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದ್ದು, ಇಂದು ಮಧ್ಯಾಹ್ನದ ಬಳಿಕ ಎಲ್ಲಾ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ನಟಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ದರ್ಶನ್ ಹಾಗೂ ಅವರ ಗ್ಯಾಂಗ್ ಭೀಕರವಾಗಿ ಹತ್ಯೆ ಮಾಡಲಾಗಿದೆ ಎನ್ನುವ ಆರೋಪ ಬಂದಿದೆ. ಜೂನ್ 11ರ ಮುಂಜಾನೆ ದರ್ಶನ್ ಅವರನ್ನು ಬಂಧಿಸಲಾಯಿತು. ಆ ಬಳಿಕ ಪವಿತ್ರಾ ಗೌಡ ಸೇರಿ 17 ಆರೋಪಿಗಳನ್ನು ಬಂಧಿಸಿದ್ದು ಸಾಕಷ್ಟು ಮಾಹಿತಿಯನ್ನು ಕಲೆ ಹಾಕಲಾಗಿದೆ.
ಇಂದು ಎರಡನೇ ಬಾರಿಗೆ ಪೊಲೀಸ್ ಕಸ್ಟಡಿ ಅಂತ್ಯ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ 24 ನೇ ಎಸಿಎಂಎಂ ನ್ಯಾಯಾಲಯದ ಎದುರು ಆರೋಪಿಗಳನ್ನು ಪೊಲೀಸರು ಹಾಜರಿಪಡಿಸಲಿದ್ದಾರೆ.
ಪೊಲೀಸ್ ಕಸ್ಟಡಿ ವೇಳೆ ಆರೋಪಿಗಳ ಸ್ವ ಇಚ್ಛಾ ಹೇಳಿಕೆ, ಸ್ಥಳ ಮಹಜರು ಸೇರಿ ಹಲವು ಮಹತ್ವದ ಸಾಕ್ಷ್ಯ ಕಲೆ ಹಾಕಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸುವಂತೆ ಪೊಲೀಸರ ಮನವಿ ಮಾಡೋ ಸಾಧ್ಯತೆ ಇದೆ.
Be the first to comment