ಜೈಲಿನಲ್ಲಿ ದರ್ಶನ್ ಆತ್ಮಹತ್ಯೆ ಯತ್ನ ವದಂತಿಗೆ ಬ್ರೇಕ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎಂಬ ವದಂತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

‘ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಕುರಿತು ಅಧಿಕಾರಿಗಳಿಂದ ಮೌಖಿಕವಾಗಿ ಮಾಹಿತಿ ಪಡೆದಿದ್ದೇನೆ. ಆದರೆ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಜೈಲು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಯಾವುದೇ ಅಧಿಕೃತ ದಾಖಲೆ ಅಥವಾ ಘಟನೆ ನಡೆದಿಲ್ಲ. ಹರಡುತ್ತಿರುವ ಎಲ್ಲಾ ವದಂತಿಗಳು ಆಧಾರರಹಿತ’ ಎಂದು ಮಾಧ್ಯಮಗಳೊಂದಿಗೆ ಮಾತನಾಡಿದ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಡಿಜಿಪಿ ಅಲೋಕ್ ಕುಮಾರ್ ಕೂಡ ಈ ಸುದ್ದಿಯನ್ನು ತಳ್ಳಿ ಹಾಕಿದ್ದು, ‘ದರ್ಶನ್ ಆರೋಗ್ಯವಾಗಿದ್ದಾರೆ. ಆತ್ಮಹತ್ಯೆ ಯತ್ನದ ಆರೋಪಗಳು ಸಂಪೂರ್ಣ ಸುಳ್ಳು’ ಎಂದು ಹೇಳಿದ್ದಾರೆ.

ಇದೇ ವೇಳೆ ದರ್ಶನ್ ಅವರಿಗೆ ಜೈಲಿನಲ್ಲಿ ಕುಟುಂಬದ ಭೇಟಿಗೆ ಅವಕಾಶ ನೀಡಲಾಗಿದೆ.  ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್ ಹಾಗೂ ಕುಟುಂಬಸ್ಥರು ಅವರನ್ನು ಭೇಟಿಯಾದ ವೇಳೆ ದರ್ಶನ್ ಭಾವುಕರಾದ ಬಗ್ಗೆ ವರದಿಯಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ನಂತರ ದರ್ಶನ್ ಕಾನೂನು ಹೋರಾಟದಲ್ಲಿ  ಹಿನ್ನಡೆ ಅನುಭವಿಸುತ್ತಿದ್ದಾರೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!