ಮಾನನಷ್ಟ ದೂರು ದಾಖಲಿಸಿದ ದರ್ಶನ್ ಪತ್ನಿ

ನಟ  ಧನ್ವೀರ್ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮಾನನಷ್ಟ ದೂರು ದಾಖಲು ಮಾಡಿದ್ದಾರೆ.

ಬೆಂಗಳೂರಿನ 37ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ  ದೂರು ಸಲ್ಲಿಕೆಯಾಗಿದೆ ಎಂದು ಹೇಳಲಾಗಿದೆ.  ಧನ್ವೀರ್ ಅವರು ತಮ್ಮ ವಿರುದ್ಧ ಮಾನನಷ್ಟ ಆಗುವ ಹೇಳಿಕೆಗಳನ್ನು ನೀಡಿದ್ದು, ಆ ಹೇಳಿಕೆಗಳನ್ನು ಮಾಧ್ಯಮ ಹಾಗೂ ಸಾರ್ವಜನಿಕವಾಗಿ ಪ್ರಕಟಿಸಿ ಪ್ರಸಾರ ಮಾಡಲಾಗಿದೆ ಎಂದು ವಿಜಯಲಕ್ಷ್ಮಿ ದೂರಿನಲ್ಲಿ ಆರೋಪಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 356(2) ರ ಅಡಿಯಲ್ಲಿ ಮಾನನಷ್ಟ ಆರೋಪ ಹೊರಿಸಲಾಗಿದೆ. ಆರೋಪಕ್ಕೆ ಸಂಬಂಧಿಸಿದ ಎಲೆಕ್ಟ್ರಾನಿಕ್ ದಾಖಲೆಗಳು, ಆಡಿಯೋ/ವೀಡಿಯೋ ರೆಕಾರ್ಡಿಂಗ್‌ಗಳನ್ನು ಸಾಕ್ಷ್ಯವಾಗಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ವಿಜಯಲಕ್ಷ್ಮೀ ಮನವಿ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳ ವಿಚಾರಣೆಗೆ ಅವಕಾಶ ನೀಡಬೇಕು.  ಖಾಸಗಿ ದೂರನ್ನು ಪರಿಗಣಿಸಿ, ಆರೋಪಿ ಧನ್ವೀರ್ ವಿರುದ್ಧ ಸಮನ್ಸ್ ಜಾರಿಗೊಳಿಸಬೇಕೆಂದು ನ್ಯಾಯಾಲಯಕ್ಕೆ ಕೋರಲಾಗಿದೆ ಎಂದು ತಿಳಿದು ಬಂದಿದೆ.

—–

 

Be the first to comment

Leave a Reply

Your email address will not be published. Required fields are marked *

Translate »
error: Content is protected !!