ದರ್ಶನ್ ವರ್ಕೌಟ್ ಫೋಟೋ ವೈರಲ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ರಾಂತಿ ಸಿನಿಮಾಗಾಗಿ ಜಿಮ್ ನಲ್ಲಿ ಬೆವರು ಹರಿಸುತ್ತಿದ್ದು, ಅವರ ಲೇಟೆಸ್ಟ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕ್ರಾಂತಿ ಸಿನಿಮಾದಲ್ಲಿ ತೊಡಗಿಸಿಕೊಂಡಿರುವ ದರ್ಶನ್ ಜಿಮ್ ನಲ್ಲಿ ಬೆವರು ಹರಿಸುತ್ತಿರುವ ಫೋಟೋವನ್ನು ಇಂಟರ್ ನೆಟ್ ನಲ್ಲಿ ಬಿಡಲಾಗಿದೆ. ಇದನ್ನು ನೋಡಿದ ದರ್ಶನ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದಾರೆ.

ಕ್ರಾಂತಿ ಮುಕ್ಕಾಲು ಭಾಗ ಶೂಟಿಂಗ್ ಮುಗಿದಿದೆ. ಹೈದರಾಬಾದ್ ನಲ್ಲಿ ಪ್ರಮುಖ ಭಾಗದ ಚಿತ್ರೀಕರಣ ನಡೆಯಬೇಕಿದೆ. ಕ್ರಾಂತಿ ಕನ್ನಡದಲ್ಲಿ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲೂ ಬಿಡುಗಡೆಯಾಗುತ್ತಿದೆ.

ಕ್ರಾಂತಿ’ ಸಿನಿಮಾವನ್ನು ವಿ.ಹರಿಕೃಷ್ಣ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ದರ್ಶನ್ ನಟನೆಯ ‘ಯಜಮಾನ’ ಸಿನಿಮಾವನ್ನು ಹರಿಕೃಷ್ಣ ನಿರ್ದೇಶನ ಮಾಡಿದ್ದರು. ಈ ಸಿನಿಮಾವನ್ನು ಶೈಲಜಾ ನಾಗ್ ಹಾಗೂ ಬಿ ಸುರೇಶ್ ನಿರ್ಮಾಣ ಮಾಡುತ್ತಿದ್ದಾರೆ. ‘ಯಜಮಾನ’ ತಂಡವೇ ‘ಕ್ರಾಂತಿ’ ಸಿನಿಮಾ ನಿರ್ಮಾಣ ಮಾಡುತ್ತಿದೆ.

ದರ್ಶನ್ ಅವರ ಹಿಂದಿನ ಸಿನಿಮಾ ‘ರಾಬರ್ಟ್’ ಬಳಿಕ ಅವರು ಯಾವುದೇ ಚಿತ್ರಗಳಲ್ಲಿ ನಟಿಸಿಲ್ಲ. ‘ರಾಜವೀರ ಮದಕರಿ ನಾಯಕ’ ಸಿನಿಮಾದ ಚಿತ್ರೀಕರಣದಲ್ಲಿ ದರ್ಶನ್ ಭಾಗಿ ಆಗಿದ್ದರೂ ಆದರೆ ಆ ಸಿನಿಮಾದ ಚಿತ್ರೀಕರಣವನ್ನು ನಿಲ್ಲಿಸಲಾಗಿದೆ. ‘ರಾಜವೀರ ಮದಕರಿ ನಾಯಕ’ ಸಿನಿಮಾವನ್ನು ಹಿರಿಯ ನಿರ್ದೇಶಕ ರಾಜೇಂದ್ರ ಬಾಬು ನಿರ್ದೇಶನ ಮಾಡುತ್ತಿದ್ದು, ರಾಕ್‌ಲೈನ್ ವೆಂಕಟೇಶ್ ನಿರ್ಮಾಣ ಮಾಡುತ್ತಿದ್ದಾರೆ.

ರಾಬರ್ಟ್ ಚಿತ್ರದಲ್ಲಿ ದರ್ಶನ್ ಅವರನ್ನು ತೆರೆಯ ಮೇಲೆ ಕಂಡ ಅಭಿಮಾನಿಗಳು ಈಗ ಕ್ರಾಂತಿ ಚಿತ್ರದ ಮೂಲಕ ಅವರನ್ನು ತೆರೆಯ ಮೇಲೆ ನೋಡಲು ಕಾಯುತ್ತಿದ್ದಾರೆ.
__

 

Be the first to comment

Leave a Reply

Your email address will not be published. Required fields are marked *

Translate »
error: Content is protected !!