Lipstick Murder Movie: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾ ವಿಚಾರವಾಗಿ ಸಾಕಷ್ಟು ಪ್ರಯತ್ನಗಳಾಗುತ್ತಿವೆ. ಇದೀಗ ಅಂಥದ್ದೇ ಮತ್ತೊಂದು ಪ್ರಯತ್ನದ ಜತೆ ಬಂದಿದೆ ಯುವ ತಂಡ. ಇಲ್ಲಿ ಚಿತ್ರಕ್ಕೆ ‘ಲಿಪ್ ಸ್ಟಿಕ್ ಮರ್ಡರ್’ ಎಂಬ ಅತ್ಯಾಕರ್ಷಕ ಶೀರ್ಷಿಕೆ ಇಟ್ಟಿದ್ದು, ಇನ್ನೇನು ತೆರೆಗೆ ಬರಲು ಸಿದ್ಧತೆ ನಡೆಸಿದೆ.
ಈ ಹಿಂದೆ ಸೈಕಲಾಜಿಕಲ್ ಥ್ರಿಲ್ಲರ್ ಕಥೆಯಿರುವ ಬ್ಲೂ ಐಸ್, ಎರೋಟಿಕ್ ಥ್ರಿಲ್ಲರ್ ಸ್ಟೋರಿ ಇದ್ದ ರೆಡ್ ನಂಥ ಚಿತ್ರಗಳನ್ನು ನಿರ್ದೇಶಿಸಿದ ರಾಜೇಶ್ ಮೂರ್ತಿ ಅವರು ಬಹಳ ದಿನಗಳ ನಂತರ ಮತ್ತೊಂದು ಚಿತ್ರದ ಮೂಲಕ ಹಾಜರಾಗಿದ್ದಾರೆ.
ಈ ಬಾರಿ ಅವರು ಇನ್ವೆಸ್ಟಿಗೇಶನ್ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿದ ‘ಲಿಪ್ ಸ್ಟಿಕ್ ಮರ್ಡರ್’ ಎಂಬ ಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ. ಸಿನಿವ್ಯಾಲಿ ಕ್ರಿಯೇಶನ್ಸ್ ಮೂಲಕ ಬಿ.ಎಸ್. ಮಂಜುನಾಥ್ ಹಾಗೂ ರಾಜೇಶ್ ಮೂರ್ತಿ ಸೇರಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಆನ್ ಲೈನ್ ಡೇಟಿಂಗ್ ಆಪ್ ಮೂಲಕ ಯುವಕರು ಯಾವರೀತಿ ಮೋಸ ಹೋಗುತ್ತಾರೆ ಎಂದು ಈ ಚಿತ್ರದ ಮೂಲಕ ಹೇಳಿದ್ದಾರೆ. ಹಿಂದೆ ಪತ್ರಿಕೆಗಳಲ್ಲಿ ಯುವಕ, ಯುವತಿಯರನ್ನು ಪ್ರಚೋದಿಸುವಂಥ ಈ ರೀತಿಯ ವರ್ಗೀಕೃತ ಜಾಹೀರಾತುಗಳು ಪ್ರಕಟವಾಗುತ್ತಿದ್ದವು, ಅದನ್ನು ನಂಬಿ ಸಾಕಷ್ಟು ಜನ ಯೂಥ್ಸ್ ಮೋಸ ಹೋಗುತ್ತಿದ್ದರು.
ಈಗ ಸೋಷಿಯಲ್ ಮೀಡಿಯಾ ತುಂಬಾ ಪ್ರಬಲವಾಗಿದ್ದು, ಅದೇ ಕೆಲಸವನ್ನು ಡೇಟಿಂಗ್ ಆಪ್ ಗಳು ಮಾಡುತ್ತಿವೆ. ಈ ಚಿತ್ರದ ಕಥೆಯಲ್ಲಿ ಡೇಟಿಂಗ್ ಆಪ್ ನಂಬಿ ಮಹಿಳೆಯರು ಕರೆದಲ್ಲಿಗೆ ಹೋಗುವ ಯುವಕರು ಮರ್ಡರ್ ಆಗುವ ಕಥೆಯಿದೆ.
ಈ ರೀತಿ ಆಡ್ ಹಾಕುವ ಯುವಕರನ್ನು ಟಾರ್ಗೆಟ್ ಮಾಡುವ ಹೆಂಗಸೊಬ್ಬಳು ಅವರನ್ನು ಒಂದು ಗುಪ್ತಜಾಗಕ್ಕೆ ಕರೆಸಿಕೊಂಡು ಅನಾಯಾಸವಾಗಿ ಮರ್ಡರ್ ಮಾಡುತ್ತಿರುತ್ತಾಳೆ. ಈ ಸರಣಿ ಕೊಲೆಗಳ ಹಿಂದಿರುವ ರಹಸ್ಯವನ್ನು ಬಯಲಿಗೆಳೆಯಲು ಒಬ್ಬ ಇನ್ವೆಸ್ಟಿಗೇಶನ್ ಆಫೀಸರ್ ಕಥೆಯಲ್ಲಿ ಎಂಟ್ರಿ ಕೊಡುತ್ತಾನೆ.
ಆ ಕೊಲೆಗಾರ್ತಿ ಯಾರು, ಕೊಲೆಯಾದವರಿಗೂ ಆಕೆಗೂ ಏನಾದರೂ ಸಂಬಂಧವಿತ್ತೇ, ಆಕೆಯೇನು ಕಿಲ್ಲರಾ, ಒಬ್ಬ ಸೈಕೋನಾ?, ಹೀಗೆ ಏಳುವ ಹಲವಾರು ಪ್ರಶ್ನೆಗಳಿಗೆ ಉತ್ತರ ಆ ಇನ್ಸ್ ಪೆಕ್ಟರ್ ನಡೆಸುವ ತನಿಖೆಯಿಂದ ಸಿಗುತ್ತದೆ.
ಇದುವರೆಗೆ ಕನ್ನಡದಲ್ಲಿ ಈ ಥರದ ಕಂಟೆಂಟ್ ಯಾರೂ ಟ್ರೈ ಮಾಡಿಲ್ಲವೆಂದೇ ಹೇಳಬಹುದು. ಈ ಹಿಂದೆ ಹರಹರ ಮಹಾದೇವ, ಉಘೇ ಉಘೇ ಮಾದೇಶ್ವರ ಧಾರಾವಾಹಿಗಳಲ್ಲಿ ನಟಿಸಿದ್ದ ಆರ್ಯನ್ ರಾಜ್ ನಾಯಕನಾಗಿ ನಟಿಸಿದ್ದ ಆರ್ಯನ್ ರಾಜ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ಹೈದರಾಬಾದ್ ಮೂಲದ ಅಲೆಕಾ ಚಿತ್ರದ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿತೆ ರಾಜೇಶ್ ಮಿಶ್ರಾ ಈ ಚಿತ್ರದಲ್ಲಿದ್ದಾರೆ. ನಿತೀಶ್ ಕುಮಾರ್ ಅವರ ಸಂಗೀತ ಸಂಯೋಜನೆ, ಆರ್.ವಿನೋದ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಈಗಾಗಲೇ ಚಿತ್ರದ ಚಿತ್ರೀಕರಣ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿದಿದ್ದು ಈಗ ಸೆನ್ಸಾರ್ ಹಂತದಲ್ಲಿದೆ.
Be the first to comment