ಡಿಯರ್ ಸತ್ಯ ಟ್ರೈಲರ್ ಬಿಡುಗಡೆ ಮಾಡಿದ ಶ್ರೀ ಮುರುಳಿ

ಆರ್ಯನ್ ಸಂತೋಷ್ ಅಭಿನಯದ ‘ಡಿಯರ್ ಸತ್ಯ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮಾರ್ಚ್ 10ರಂದು ಅದ್ದೂರಿಯಾಗಿ ಸಿನಿಮಾವನ್ನು ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.  ಚಿತ್ರದ ಟ್ರೇಲರ್ ಬಿಡುಗಡೆ ಚಿತ್ರತಂಡ ಮಾಡಿದೆ.’ಡಿಯರ್ ಸತ್ಯ’ ತಂಡದ ಈ ಪ್ರಯತ್ನಕ್ಕೆ ಸ್ಯಾಂಡಲ್‌ವುಡ್‌ನ ರೋರಿಂಗ್ ಸ್ಟಾರ್ ಶ್ರೀಮುರಳಿ  ಸಾಥ್ ನೀಡಿದ್ದಾರೆ. ‘ಡಿಯರ್ ಸತ್ಯ’ ಸಿನಿಮಾದ ಟ್ರೇಲರ್ ಲಾಂಚ್ ಮಾಡಿದ್ದಾರೆ.

ಪರ್ಪಲ್ ರಾಕ್ ಎಂಟರ್‌ಟೈನರ್ ಹಾಗೂ ವಿಂಟರ್ ಬ್ರಿಡ್ಜ್ ಸ್ಟುಡಿಯೋಸ್ ಲಾಂಛನದಲ್ಲಿ ಗಣೇಶ್ ಪಾಪಣ್ಣ, ಯತೀಶ್ ವೆಂಕಟೇಶ್, ಶ್ರೀನಿವಾಸ್ ಶ್ರೀಭಕ್ತ ಹಾಗೂ ಅಜಯ್ ಅಪರೂಪ ಅವರು ‘ಡಿಯರ್ ಸತ್ಯ’ ಚಿತ್ರಕ್ಕೆ ಹಣ ಹಾಕಿದ್ದಾರೆ. ಟ್ರೇಲರ್ ರಿಲೀಸ್ ಮಾಡಿ ಮಾತನಾಡಿದ ಶ್ರೀಮುರಳಿ, ‘ಸಂತೋಷ್ ನನಗೆ ತುಂಬಾ ವರ್ಷಗಳ ಸ್ನೇಹಿತ. ಈಗ ಆರ್ಯನ್ ಸಂತೋಷ್ ಆಗಿದ್ದಾರೆ. ನಿರ್ಮಾಪಕ ಯತೀಶ್, ಗಣೇಶ್ ಪಾಪಣ್ಣ ಕೂಡ ನನಗೆ ಬಹಳ ದಿನಗಳ ಪರಿಚಯ. ಟ್ರೇಲರ್ ತುಂಬಾ ಚೆನ್ನಾಗಿ ‌ಮೂಡಿಬಂದಿದೆ.  ನನ್ನ ಸ್ನೇಹಿತ ಸಂತೋಷ್‌ಗೆ ಈ ಚಿತ್ರ ಯಶಸ್ಸು ತಂದುಕೊಡಲಿ’ ಎಂದು ಶ್ರೀಮುರಳಿ ಹಾರೈಸಿದರು.

https://youtu.be/yhEnStbreas

 

Be the first to comment

Leave a Reply

Your email address will not be published. Required fields are marked *

Translate »
error: Content is protected !!