ಡಿ.10ಕ್ಕೆ ವಿಶ್ವದಾದ್ಯಂತ “ಮಡ್ಡಿ” ಚಿತ್ರ ಬಿಡುಗಡೆ

ಹೊಸಬರು ಪಳಗಿದ ತಂತ್ರಜ್ಱರ ಜತೆ ಸೇರಿ ಅಂತಾರಾಷ್ಟ್ರೀಯ ಸಿದ್ಧವಾದ ಹೊಸ ಪ್ರಯತ್ನವೇ ಮಡ್ಡಿ ಸಿನಿಮಾ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಈ ಸಿನಿಮಾ ಇದೇ ಡಿಸೆಂಬರ್ 10ಕ್ಕೆ ವಿಶ್ವದಾದ್ಯಂತ ಬಿಡುಗಡೆಗೊಳ್ಳಲಿದೆ.

ಪಿಕೆ7 ಪ್ರೊಡಕ್ಷನ್ಸ್ ಹೌಸ್ ಅಡಿಯಲ್ಲಿ ಪ್ರೇಮ್ ಕೃಷ್ಣ ದಾಸ್ ನಿರ್ಮಾಣದಲ್ಲಿ ಡಾ. ಪ್ರಗ್ಬಲ್ ದಾಸ್ ನಿರ್ದೇಶನದ ಮೊದಲ ಹೆಜ್ಜೆ. ಈ ಚಿತ್ರದ ಮೊದಲ ಟೀಸರ್ ಕೆಲ ತಿಂಗಳ ಹಿಂದಷ್ಟೇ ಬಿಡುಗಡೆ ಆಗಿದ್ದು, ಅಭೂತಪೂರ್ವ ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಬಿಡುಗಡೆಯ ಹೊಸ್ತಿಲಿಗೆ ಬಂದಿದೆ.

ಈ ಚಿತ್ರದ ಕಲಾವಿದರೆಲ್ಲ ಯಾವುದೇ ಡ್ಯೂಪ್ ಬಳಸದೆ ಹಲವು ಶೈಲಿಯ ಮಡ್​ ರೇಸ್​ನಲ್ಲಿ ಪರಿಣಿತಿ ಪಡೆದಿದ್ದಾರೆ. ಒಟ್ಟು 13 ಕ್ಯಾಮರಾಗಳನ್ನು ಶೂಟಿಂಗ್ನಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ. ಸ್ಯಾನ್​ ಲೋಕೇಶ್​ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ.

ಕೆಜಿಎಫ್ ಸಿನಿಮಾ ಖ್ಯಾತಿಯ ರವಿ ಬಸ್ರೂರು ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅದೇ ರೀತಿ ಹಾಲಿವುಡ್​ ಸಿನಿಮಾಗಳ ಛಾಯಾಗ್ರಹಣ ವಿಭಾಗದಲ್ಲಿ ಕೆಲಸ ಮಾಡಿರುವ ಕೆ.ಜಿ ರತೀಶ್​ ಈ ಸಿನಿಮಾಕ್ಕೆ ಕ್ಯಾಮರಾಮನ್ ಆಗಿದ್ದಾರೆ. ಕಲರಿಸ್ಟ್​ ಆಗಿ ರಂಗ ಕೆಲಸ ಮಾಡಿದ್ದಾರೆ.

ಕಳೆದ ಐದು ವರ್ಷಗಳ ಕಾಲ ಮಡ್ ರೇಸ್​ ಬಗ್ಗೆ ಅಧ್ಯಯನ ನಡೆಸಿ ಈ ಸಿನಿಮಾ ಮಾಡಿರುವ ಪ್ರಗ್ಬಲ್​, ಎರಡು ತಂಡಗಳ ನಡುವಿನ ಸ್ಪರ್ಧೆಯನ್ನು ಈ ಸಿನಿಮಾದಲ್ಲಿ ತೋರಿಸಿದ್ದಾರೆ. ಇದರ ಜತೆಗೆ ಫ್ಯಾಮಿಲಿ ಸೆಂಟಿಮೆಂಟ್, ಭಾವನಾತ್ಮಕ ಅಂಶಗಳು ಮತ್ತು ಅಡ್ವೆಂಚರಸ್​ ತಿರುವುಗಳನ್ನೂ ಈ ಸಿನಿಮಾದಲ್ಲಿ ಮಿಶ್ರಣ ಮಾಡಿದ್ದಾರೆ.

ನೈಜ ಅರಣ್ಯ ಪ್ರದೇಶದಲ್ಲಿ ಇಡೀ ಸಿನಿಮಾದ ಶೂಟಿಂಗ್ ಆಗಿದ್ದು, ಸಿಂಕ್ ಸೌಂಡ್ ಟೆಕ್ನಾಲಜಿ ಬಳಸಿ ಸಿನಿಮಾ ಮೂಡಿಬಂದಿದ್ದು, ಬಹುತೇಕ ಹೊಸಬರೇ ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಯುವನ್, ರಿಧಾನ್ ಕೃಷ್ಣ, ಅನುಷಾ ಸುರೇಶ್, ಅಮಿತ್ ಶಿವದಾಸ್ ನಾಯರ್, ಹರೀಶ್ ಪೆರಾಡಿ, ವಿಜಯನ್, ರೆಂಜಿ ಪೆನಿಕರ್ ತಾರಾಗಣದಲ್ಲಿದ್ದಾರೆ. ಈ ಹಿಂದೆ ಈ ಚಿತ್ರದ ಟೀಸರ್ ಅನ್ನು ಹಲವು ಭಾಷೆಗಳಲ್ಲಿ ಆಯಾ ಭಾಷೆಯ ಸ್ಟಾರ್ ಕಲಾವಿದರು ಟೀಸರ್ ಬಿಡುಗಡೆ‌ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

Be the first to comment

Leave a Reply

Your email address will not be published. Required fields are marked *

Translate »
error: Content is protected !!