ಡಿಸೆಂಬರ್ ನಲ್ಲಿ ಬಿಡುಗಡೆ ‘ವಾಸಂತಿ ನಲಿದಾಗ’

ವಾಸಂತಿ ನಲಿದಾಗ’ ಎಂಬ ಕಾಲೇಜ್ ಯೂತ್ ಲವ್ ಸ್ಟೋರಿ ಒಳಗೊಂಡ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಬಿಡುಗಡೆಗೆ ಸಿದ್ದವಾಗಿದೆ. ಟೈಟಲ್ ಮೂಲಕವೇ ಸಖತ್ ಸುದ್ದಿಯಲ್ಲಿರುವ ಚಿತ್ರ ಈ ಹಿಂದೆ ‘ಕೇಳ್ರಪ್ಪೋ ಕೇಳಿ’ ವೀಡಿಯೋ ಸಾಂಗ್ ಬಿಡುಗಡೆ ಮಾಡಿ ಸೌಂಡ್ ಮಾಡಿತ್ತು ಇದೀಗ ನಾಗೇಂದ್ರ ಪ್ರಸಾದ್ ಬರೆದ ‘ಕಾಲೇಜ್ ಗೆ ಕಾಲು ಇಟ್ಟರೆ ಕನಸುಗಳು ಜೋರು’ ಎಂಬ ಮತ್ತೊಂದು ಯೂತ್ ಫುಲ್ ಸಾಂಗ್ ರಿಲೀಸ್ ಮಾಡಿದೆ.

ಅಂದ್ಹಾಗೆ ಈ ಚಿತ್ರ ಅಕ್ಟೋಬರ್ 14ರಂದೇ ಬಿಡುಗಡೆಯಾಗಬೇಕಿತ್ತು. ಆದ್ರೆ ಚಿತ್ರಮಂದಿರದ ಸಮಸ್ಯೆಯಿಂದ ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ. ಇದೆಲ್ಲದರ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಇಂದು ಸಿನಿಮಾ ತಂಡ ಮಾಧ್ಯಮದೆದುರು ಬಂದಿತ್ತು.

ನಿರ್ದೇಶಕ ರವೀಂದ್ರ ವೆಂಶಿ ಮಾತನಾಡಿ ಅಕ್ಟೋಬರ್ 14ರಂದೇ ಸಿನಿಮಾ ಬಿಡುಗಡೆಯಾಗಬೇಕಿತ್ತು. ಅದಕ್ಕಾಗಿ ಪ್ರಚಾರ ಕಾರ್ಯವನ್ನು ಮಾಡಿ ಮುಗಿಸಿದ್ದೆವು. ಆದ್ರೆ ಚಿತ್ರಮಂದಿರದ ಸಮಸ್ಯೆಯಿಂದ ಅಕ್ಟೋಬರ್ 14ರಂದು ಬಿಡುಗಡೆ ಮಾಡಲಾಗಲಿಲ್ಲ.

ಇದು ಸ್ಟಾರ್ ಸಿನಿಮಾ ಅಲ್ಲ ಹೊಸಬರ ಸಿನಿಮಾ ಆದ್ರಿಂದ ದೊಡ್ಡ ಸಿನಿಮಾದ ಜೊತೆ ಕಾಂಪಿಟೇಶನ್ ಬೇಡ ಎಂದು ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಡಿಸೆಂಬರ್ ನಲ್ಲಿ ಸಿನಿಮಾ ತೆರೆಗೆ ತರಲು ಪ್ಲ್ಯಾನ್ ಮಾಡಿಕೊಂಡಿದ್ದೇವೆ, ಸದ್ಯದಲ್ಲೇ ಸಿನಿಮಾ ಬಿಡುಗಡೆ ದಿನಾಂಕವನ್ನು ಅನೌನ್ಸ್ ಮಾಡಲಿದ್ದೇವೆ ಎಂದು ರವೀಂದ್ರ ವೆಂಶಿ ತಿಳಿಸಿದ್ರು.

ನಾಯಕ ರೋಹಿತ್ ಶ್ರೀಧರ್ ಮಾತನಾಡಿ ಅಕ್ಟೋಬರ್ 14ರಂದು ನಮ್ಮ ಸಿನಿಮಾ ಬಿಡುಗಡೆ ಆಗಬೇಕಿತ್ತು. ಚಿತ್ರಮಂದಿರದಲ್ಲಿ ಕಾಂತಾರ, ಗುರು ಶಿಷ್ಯರು ಸಿನಿಮಾಗಳು ಚೆನ್ನಾಗಿ ಓಡುತ್ತಿದ್ದರಿಂದ ಸಿನಿಮಾ ಬಿಡುಗಡೆಯನ್ನು ಹಿಂತೆಗೆದುಕೊಂಡ್ವಿ. ಡಿಸೆಂಬರ್ ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಲ್ಲರೂ ಸಪೋರ್ಟ್ ಮಾಡಿ ಎಂದು ತಿಳಿಸಿದ್ರು.

ಪುಟಾಣಿ ಸಫಾರಿ, ವರ್ಣಮಯ ಸಿನಿಮಾಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದ ರವೀಂದ್ರ ವೆಂಶಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಸಿನಿಮಾವಿದು. ಹೊಸ ಪ್ರತಿಭೆಗಳೊಂದಿಗೆ ಕಾಲೇಜ್ ಯೂತ್ ಲವ್ ಸ್ಟೋರಿ ಸಬ್ಜೆಕ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿ ಸಿನಿ ಪ್ರೇಕ್ಷಕರೆದುರು ಬರಲು ಸಜ್ಜಾಗಿದ್ದಾರೆ.

ಮೊದಲೇ ಹೇಳಿದ ಹಾಗೆ ವಾಸಂತಿ ನಲಿದಾಗ ಚಿತ್ರ ನವ ಹಾಗೂ ಯುವ ಪ್ರತಿಭೆಗಳಿಂದ ಕೂಡಿದೆ. ರೋಹಿತ್ ಶ್ರೀಧರ್, ಭಾವನ ಶ್ರೀನಿವಾಸ್, ಜೀವಿತ ವಸಿಷ್ಠ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಕೆ. ಎನ್ ಶ್ರೀಧರ್ ಜೇನುಗೂಡು ಬ್ಯಾನರ್ ನಡಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಶ್ರೀ ಗುರು ಸಂಗೀತ ನಿರ್ದೇಶನ, ಸಿ.ರವಿಚಂದ್ರನ್ ಸಂಕಲನ, ಪ್ರಮೋದ್ ಭಾರತೀಯ ಛಾಯಾಗ್ರಾಹಣ ಚಿತ್ರಕ್ಕಿದೆ. ಹಾಡುಗಳಿಗೆ ಯೋಗರಾಜ್ ಭಟ್, ನಾಗೇಂದ್ರ ಪ್ರಸಾದ್, ಗೌಸ್ ಫೀರ್ ಸಾಹಿತ್ಯವಿದೆ. ಸಾಯಿಕುಮಾರ್, ಸುಧಾರಾಣಿ, ಸಾಧುಕೋಕಿಲ, ಮಂಜು ಪಾವಗಡ, ಮಿಮಿಕ್ರಿ ಗೋಪಿ ಒಳಗೊಂಡ ಅನುಭವಿ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!