ಡೀಪ್‍ಫೇಕ್ ಪ್ರಕರಣ: ಯುವಕನ ವಿಚಾರಣೆ

ರಶ್ಮಿಕಾ ಮಂದಣ್ಣ ಅವರ ಡೀಪ್‍ಫೇಕ್ ವೀಡಿಯೊ ಪ್ರಕರಣ ಸಂಬಂಧ ದೆಹಲಿ ಪೊಲೀಸರು ಬಿಹಾರದ 19 ವರ್ಷದ ಯುವಕನನ್ನು ಪ್ರಶ್ನಿಸಿದ್ದಾರೆ.

ಯುವಕ ಮೊದಲು ತನ್ನ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ವೀಡಿಯೊವನ್ನು ಅಪ್‍ಲೋಡ್ ಮಾಡಿದ್ದಾನೆ. ನಂತರ ಅದನ್ನು ಇತರ ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಇನ್‍ಸ್ಟಾಗ್ರಾಮ್ ಖಾತೆಯಿಂದ ವೀಡಿಯೊವನ್ನು ಡೌನ್‍ಲೋಡ್ ಮಾಡಿರುವುದಾಗಿ ಅವರು ಹೇಳಿದ್ದರೂ, ನಾವು ಅವರನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಡೀಪ್‍ಫೇಕ್ ಪ್ರಕರಣ ಸಂಬಂಧ ನವೆಂಬರ್ 10 ರಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 465 ಮತ್ತು 469 (ಪ್ರತಿಷ್ಠೆಗೆ ಹಾನಿ ಮಾಡುವ ಉದ್ದೇಶದಿಂದ ನಕಲಿ) ಮತ್ತು ಇಂಟೆಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್‍ನಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಇ ಮತ್ತು 66ಉ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಆದರೆ ಈ ಪ್ರಕರಣಕ್ಕೆ ಸಂಬಂಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಎಫ್‍ಐಆರ್ ದಾಖಲಿಸಿದ ಕೂಡಲೇ ಐಎಫ್‍ಎಸ್‍ಒ ಘಟಕವು ಆರೋಪಿಯನ್ನು ಗುರುತಿಸಲು ಯುಆರ್‍ಎಲ್ ಮತ್ತು ಇತರ ವಿವರಗಳನ್ನು ಪಡೆಯಲು ಮೆಟಾಗೆ ಪತ್ರ ಬರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ಪ್ರಕರಣ ಸಂಬಂಧ ಸಾರ್ವಜನಿಕ ವಲಯ ಸೇರಿದಂತೆ ಸೆಲೆಬ್ರಿಟಿಗಳಿಂದ ಆಕ್ಷೇಪ ವ್ಯಕ್ತವಾಗಿತ್ತು.

——

Be the first to comment

Leave a Reply

Your email address will not be published. Required fields are marked *

Translate »
error: Content is protected !!