ದೀಪಕ್ ಅರಸ್

ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್ ಅರಸ್ ನಿಧನ

ನಟಿ ಅಮೂಲ್ಯ ಅವರ ಸಹೋದರ, ನಿರ್ದೇಶಕ ದೀಪಕ್ ಅರಸ್ ಅವರು ಗುರುವಾರ ನಿಧನರಾಗಿದ್ದಾರೆ.

ಕಿಡ್ನಿ ವೈಫಲ್ಯದಿಂದಾಗಿ ದೀಪಕ್ ಅರಸ್‌ ಅವರು ಗುರುವಾರ ಸಂಜೆ 7 ಗಂಟೆ ಸುಮಾರಿಗೆ ನಿಧನರಾಗಿದ್ದಾರೆಂದು ತಿಳಿದು ಬಂದಿದೆ. ಅವರಿಗೆ 42 ವರ್ಷ ವಯಸ್ಸಾಗಿತ್ತು.

ದೀಪಕ್ ಅರಸ್ ಅವರಿಗೆ ಕಿಡ್ನಿ ವೈಫಲ್ಯ ಆಗಿತ್ತು. ಇದಕ್ಕಾಗಿ ಡಯಾಲಿಸಿಸ್ ಮಾಡಿಸುತ್ತಿದ್ದರು.  ಚಿಕಿತ್ಸೆ ಫಲಕಾರಿ ಆಗದೇ ಇಹಲೋಕ ತ್ಯಜಿಸಿದ್ದಾರೆ. ದೀಪಕ್ ಅರಸ್ ಸಾವಿನಿಂದಾಗಿ ಅಮೂಲ್ಯ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ದೀಪಕ್ ಅರಸ್‌ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು. ಕನ್ನಡದ ‘ಮನಸಾಲಜಿ’, ‘ಶುಗರ್ ಫ್ಯಾಕ್ಟರಿ’ ಸಿನಿಮಾಗಳಿಗೆ ದೀಪಕ್ ಅರಸ್‌ ಆಕ್ಷನ್ ಕಟ್ ಹೇಳಿದ್ದರು.

ವೈಯಾಲಿ ಕಾವಲ್ ನಿವಾಸದಲ್ಲಿ ದೀಪಕ್ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಚಿತ್ರರಂಗದ ನಟ-ನಟಿಯರು ಬಂದು ಅಂತಿಮ ದರ್ಶನ ಮಾಡಿದ್ದಾರೆ. ಇಂದು ಮ. 3 ಗಂಟಗೆ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ. ಸುಮನಹಳ್ಳಿ ಹಿಂದೂ ರುದ್ರಭೂಮಿಯಲ್ಲಿ ದೀಪಕ್ ಅಂತ್ಯ ಸಂಸ್ಕಾರ ನಡೆಯಲಿದೆ ಎನ್ನಲಾಗಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!