‘ರಾಕಾ’ದಿಂದ ದೀಪಿಕಾ ಹೊರಗೆ?

ಅಲ್ಲು ಅರ್ಜುನ್ ನಾಯಕನಾಗಿ ನಟಿಸುತ್ತಿರುವ ಈ ಬಹುನಿರೀಕ್ಷಿತ ಚಿತ್ರದಿಂದ ದೀಪಿಕಾ ಅವರನ್ನು ಕೈಬಿಡಲಾಗುತ್ತಿದೆ ಎನ್ನುವ ವದಂತಿ ಹಬ್ಬಿದ್ದು, ಚಿತ್ರತಂಡ ಇದನ್ನು ತಳ್ಳಿಹಾಕಿದೆ.

ದೀಪಿಕಾ ಪಡುಕೋಣೆ ಎರಡನೇ ಬಾರಿ ತಾಯಿಯಾಗುತ್ತಿರುವ ಕಾರಣ ಅವರನ್ನು ಸಿನಿಮಾದಿಂದ ಕೈ ಬಿಡಲಾಗುತ್ತದೆ ಇಲ್ಲವೇ ಅವರ ಪಾತ್ರವನ್ನು ಕಡಿತಗೊಳಿಸಲಾಗುತ್ತದೆ ಎನ್ನುವ ವದಂತಿ ಹಬ್ಬಿತ್ತು. ಆದರೆ ಈ ಬಗ್ಗೆ ಈಗ ಚಿತ್ರತಂಡ ಸ್ಪಷ್ಟೀಕರಣ ನೀಡಿದೆ.

‘ಚಿತ್ರದ ಕೆಲಸ ಎಲ್ಲವೂ ಯೋಜನೆಯಂತೆ ನಡೆಯುತ್ತಿದೆ. ದೀಪಿಕಾ ಪಡುಕೋಣೆ ಈ ಚಿತ್ರದಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಚಿತ್ರೀಕರಣವೂ ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯುತ್ತಿದೆ’ ಎಂದು ಚಿತ್ರತಂಡ ಹೇಳಿದೆ.

ಗರ್ಭಿಣಿಯಾಗಿದ್ದರೂ ದೀಪಿಕಾ ಚಿತ್ರೀಕರಣದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಕೆಲವು ಪ್ರಮುಖ ಸಾಹಸ ದೃಶ್ಯಗಳಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯದ ದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಶೂಟಿಂಗ್ ನಡೆಸಲಾಗುತ್ತಿದೆ ಎಂದು ಚಿತ್ರತಂಡ ಹೇಳಿದೆ.

ಅಟ್ಲಿ ನಿರ್ದೇಶನದ ಈ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಿಸುತ್ತಿದೆ. ಚಿತ್ರ 2027ರಲ್ಲಿ ಬಿಡುಗಡೆ ಆಗುವ ನಿರೀಕ್ಷೆಯಿದೆ. ಅಲ್ಲು ಅರ್ಜುನ್ ಮತ್ತು ದೀಪಿಕಾ ಪಡುಕೋಣೆ ಇದೇ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವುದರಿಂದ ಚಿತ್ರದ ಬಗ್ಗೆ ನಿರೀಕ್ಷೆ ಹುಟ್ಟಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!