Devaraj: ಸಲಾರ್ ಸಿನಿಮಾಗೆ ಎಂಟ್ರಿಕೊಟ್ಟ ಕನ್ನಡದ ಸ್ಟಾರ್ ನಟ!

ಸಲಾರ್ ಚಿತ್ರತಂಡಕ್ಕೆ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದೇವರಾಜ್‌ ಅವರ ಎಂಟ್ರಿ ಆಗಿದೆ.

ಪ್ರಶಾಂತ್ ನೀಲ್ ನಿರ್ದೇಶನದ, ತೆಲುಗಿನ ಸ್ಟಾರ್ ನಟ ಪ್ರಭಾಸ್ ನಟನೆಯ ‘ಸಲಾರ್’ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಡೈನಾಮಿಕ್ ಸ್ಟಾರ್ ದೇವರಾಜ್ ಸಲಾರ್ ಸಿನಿಮಾದಲ್ಲಿ ನಟಿಸಿದ್ದು ಈ ಬಗ್ಗೆ ಸ್ವತಃ ದೇವರಾಜ್ ಅವರೇ ಮಾಹಿತಿ ನೀಡಿದ್ದಾರೆ.

ಈಗಾಗಲೇ ಕನ್ನಡದ ನಟ ಪ್ರಮೋದ್ ಸಿನಿಮಾದಲ್ಲಿ ಎಂಟ್ರಿ ಕೊಟ್ಟಿದ್ದು ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಈಗ ದೇವರಾಜ್‌ ಈ ಚಿತ್ರದಲ್ಲಿ ನಟಿಸುವ ಮೂಲಕ ನಿರೀಕ್ಷೆ ಹೆಚ್ಚಿದೆ.

ಸ್ಯಾಂಡಲ್ ವುಡ್ ನ ಸ್ಟಾರ್ ನಾಯಕ, ಖಳನಟನಾಗಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿರುವ ದೇವರಾಜ್ ಸಲಾರ್ ಸಿನಿಮಾದ ಮೂಲಕ ಟಾಲಿವುಡ್ ಚಿತ್ರರಂಗಕ್ಕೆ ಎಂಟ್ರಿ ಟ್ಟಿದ್ದಾರೆ. ಸಿನಿಮಾದಲ್ಲಿ ಆದರೆ ದೇವರಾಜ್‌ ಚಿತ್ರದಲ್ಲಿ ವ ರೀತಿಯ ಪಾತ್ರ ಅನ್ನೋ ಗುಟ್ಟನ್ನು ಮಾತ್ರ ಬಿಟ್ಟುಕೊಟ್ಟಿಲ್ಲ.

ʼಮೊದಲ ಭಾಗದಲ್ಲಿ ನಾನು ಹೆಚ್ಚಾಗಿ ಕಾಣಿಸಿಕೊಳ್ಳುವುದಿಲ್ಲ, ಎರಡನೇ ಭಾಗದಲ್ಲಿ ಪ್ರಭಾಸ್ ಜೊತೆ ಹೆಚ್ಚಿನ ದೃಶ್ಯಗಳು ಮತ್ತು ಜಗಪತಿ ಬಾಬು ಮತ್ತು ಪೃಥ್ವಿರಾಜ್ ಸುಕುಮಾರನ್ ಅವರ ಕಾಂಬಿನೇಷನ್ ದೃಶ್ಯಗಳು ಇರುತ್ತವೆʼ ಎಂದು ದೇವರಾಜ್‌ ಹೇಳಿದ್ದಾರೆ.

ಸಲಾರ್​​ನಲ್ಲಿ ಶ್ರುತಿ ಹಾಸನ್ ಅವರು ಆದ್ಯ ಹೆಸರಿನ ಪಾತ್ರವನ್ನು ಮಾಡುತ್ತಿದ್ದಾರೆ. ಪ್ರಭಾಸ್ ಜತೆ ಅವರು ನಟಿಸುತ್ತಿರುವ ಮೊದಲ ಸಿನಿಮಾ ಇದಾಗಿದೆ.

ಪ್ರಶಾಂತ್ ನೀಲ್ ತೆಲುಗಿನಲ್ಲಿ ಸಿನಿಮಾ ಮಾಡುತ್ತಿದ್ದರೂ, ಕನ್ನಡದ ಅನೇಕ ಕಲಾವಿದರನ್ನು ಮತ್ತು ತಂತ್ರಜ್ಞರನ್ನು ಆ ಚಿತ್ರಕ್ಕಾಗಿ ಬಳಸಿಕೊಂಡಿದ್ದಾರೆ. ಸಿನಿಮಾಟೋಗ್ರಾಫರ್, ಸಂಕಲನಕಾರ ಸೇರಿದಂತೆ ಅನೇಕ ಕನ್ನಡಿಗರು ಈ ಚಿತ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ.
—-

Be the first to comment

Leave a Reply

Your email address will not be published. Required fields are marked *

Translate »
error: Content is protected !!