ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ‘ಡೆವಿಲ್’ ಚಿತ್ರದ ಅಡ್ವಾನ್ಸ್ ಬುಕ್ಕಿಂಗ್ ಇಂದು ಮಧ್ಯಾಹ್ನ 1ರಿಂದ ಶುರು ಆಗಿದೆ.
‘ಡೆವಿಲ್’ ಸಿನಿಮಾ ಇದೇ ಡಿಸೆಂಬರ್ 11ರಂದು ರಿಲೀಸ್ ಆಗುತ್ತಿದೆ. ಚಿತ್ರದ ಮೇಲೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಕೇವಲ 2 ಗಂಟೆಯಲ್ಲಿ 7.5 ಲಕ್ಷ ಮಂದಿ ಟ್ರೇಲರ್ ವೀಕ್ಷಿಸಿದ್ದಾರೆ. ದರ್ಶನ್ ಅವರು ಟ್ರೇಲರ್ನಲ್ಲಿ ಹಲವು ಗೆಟಪ್ಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಡೆವಿಲ್’ ಸಿನಿಮಾದಲ್ಲಿ ದರ್ಶನ್ಗೆ ನಾಯಕಿಯಾಗಿ ರಚನಾ ರೈ ನಟಿಸಿದ್ದಾರೆ. ಅಚ್ಯುತ್ ಕುಮಾರ್, ಮಹೇಶ್ ಮಂಜ್ರೇಕರ್, ಶರ್ಮಿಳಾ ಮಾಂಡ್ರೆ, ಶೋಭರಾಜ್ ಮೊದಲಾದವರು ನಟಿಸಿದ್ದಾರೆ. ಸಿನಿಮಾಗೆ ಪ್ರಕಾಶ್ ವೀರ್ ನಿರ್ದೇಶನವಿದೆ. ಪ್ರಕಾಶ್ ಹಾಗೂ ಜಯಮ್ಮ ಚಿತ್ರ ನಿರ್ಮಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕೆ ಇದೆ.
‘ಡೆವಿಲ್’ ಚಿತ್ರದ ಮೊದಲ ಪ್ರದರ್ಶನ ಡಿಸೆಂಬರ್ 11ರಂದು ಬೆಳಿಗ್ಗೆ 6.30 ರಿಂದ ಆರಂಭವಾಗಲಿದೆ. ಅಭಿಮಾನಿಗಳು ಮತ್ತು ಚಿತ್ರತಂಡ ಪ್ರಚಾರದಲ್ಲಿ ನಿರತವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಚಿತ್ರಮಂದಿರಗಳ ಮೇಲೆ ದರ್ಶನ್ ಅವರ ಕಟೌಟ್ ಗಳು ರಾರಾಜಿಸುತ್ತಿವೆ.
ಬೆಂಗಳೂರಿನ ನವರಂಗ ಚಿತ್ರಮಂದಿರದ ಮುಂಭಾಗ ಪಟಾಕಿ ಸಿಡಿಸಿ, ಬೃಹತ್ ಮೂರು ಕಟೌಟ್ ಹಾಕುವ ಮೂಲಕ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
—-





Be the first to comment