‘ಡೆವಿಲ್’ ಒಟಿಟಿಗೆ ಎಂಟ್ರಿ

ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಏಳು ತಿಂಗಳ ಬಳಿಕ ಒಟಿಟಿಗೆ ಎಂಟ್ರಿ ಕೊಡುತ್ತಿದೆ.

ಜುಲೈ 17ರಿಂದ ‘ಡೆವಿಲ್’ ಚಿತ್ರವನ್ನು ಜೀ5  ಒಟಿಟಿ ವೇದಿಕೆಯಲ್ಲಿ ವೀಕ್ಷಿಸಬಹುದಾಗಿದೆ. ಕಳೆದ ವರ್ಷದ ಡಿಸೆಂಬರ್‌ನಲ್ಲಿ ತೆರೆಕಂಡಿದ್ದ ‘ಡೆವಿಲ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ದಾಖಲಿಸಿರಲಿಲ್ಲ. ಸಿನಿಮಾ ಒಟಿಟಿಗೆ ಯಾವಾಗ ಬರಲಿದೆ ಎಂಬುದನ್ನು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು.

ಜೀ5 ಅಧಿಕೃತವಾಗಿ ಸ್ಟ್ರೀಮಿಂಗ್ ದಿನಾಂಕವನ್ನು ಘೋಷಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಜೀ5, ಅಧಿಕಾರದ ಆಟದಲ್ಲಿ ಇವನದೇ ರೂಲ್ಸ್. ಸಿಂಹಾಸನ ಒಂದೇ, ಅದರ ಮೇಲೆ ಕೂರೋ ರಾಜನೂ ಒಬ್ಬನೇ… ದಿ ಡೆವಿಲ್. ಜುಲೈ 17ರಿಂದ ZEE5 ಕನ್ನಡದಲ್ಲಿ ಸ್ಟ್ರೀಮಿಂಗ್” ಎಂದು ತಿಳಿಸಿದೆ.

ಸದ್ಯಕ್ಕೆ ಸಿನಿಮಾ ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ. ಇತರೆ ಭಾಷೆಗಳ ಡಬ್ಬಿಂಗ್ ಕುರಿತು ಯಾವುದೇ ಮಾಹಿತಿ ಹೊರ ಬಿದ್ದಿಲ್ಲ. ಚಿತ್ರದ ಸ್ಯಾಟಲೈಟ್ ಹಕ್ಕುಗಳನ್ನೂ ಜೀ ಸಂಸ್ಥೆ ಪಡೆದುಕೊಂಡಿದ್ದು, ಶೀಘ್ರದಲ್ಲೇ ಜೀ ಕನ್ನಡ ವಾಹಿನಿಯಲ್ಲಿ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್  ಪ್ರಸಾರವಾಗುವ ನಿರೀಕ್ಷೆಯಿದೆ.

ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಕಾರಣ ‘ಡೆವಿಲ್’ ಸಿನಿಮಾ ಚಿತ್ರೀಕರಣ ಸ್ಥಗಿತಗೊಂಡಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಅವರು ಉಳಿದ ಭಾಗದ ಚಿತ್ರೀಕರಣ ಹಾಗೂ ಡಬ್ಬಿಂಗ್ ಪೂರ್ಣಗೊಳಿಸಿದ್ದರು.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!