‘ಡೆವಿಲ್’ ಚಿತ್ರವು ಇದೇ ಕ್ರಿಸ್ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ.
ಹೊಸ ರಿಲೀಸ್ ದಿನಾಂಕವನ್ನು ದರ್ಶನ್ ಘೋಷಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸಿನಿಮಾ ಅಕ್ಟೋಬರ್ನಲ್ಲೇ ರಿಲೀಸ್ ಆಗಬೇಕಿತ್ತು. ಆದರೆ ದರ್ಶನ್ ಕೈಗೆ ಪೆಟ್ಟಾದ ಕಾರಣ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ.
‘ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಹಾಗೂ ಕನ್ನಡಾಭಿಮಾನಿಗಳಿಗೆ ವಿಶೇಷ ಪ್ರಕಟಣೆ – ‘ಡೆವಿಲ್’ ಚಿತ್ರವು ಇದೇ ಕ್ರಿಸ್ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ. ನಿಮ್ಮ ಪ್ರೀತಿ-ಹಾರೈಕೆ ಸದಾ ಕನ್ನಡ ಚಿತ್ರಗಳ ಮೇಲಿರಲಿ’ ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.
‘ಡೆವಿಲ್’ ಚಿತ್ರವನ್ನು ಪ್ರಕಾಶ್ ವೀರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅವರು ಈ ಮೊದಲು ದರ್ಶನ್ ನಟನೆಯ ‘ತಾರಕ್’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾ 2017ರಲ್ಲಿ ಬಿಡುಗಡೆ ಆಗಿತ್ತು.
ದರ್ಶನ್ ಅವರು ವರ್ಷಕ್ಕೆ ಎರಡು ಸಿನಿಮಾಗಳಲ್ಲಿ ನಟಿಸೋ ಟಾರ್ಗೆಟ್ ಇಟ್ಟುಕೊಂಡಿದ್ದರು. ಈಗ ಕೈಗೆ ಪೆಟ್ಟಾಗಿರುವುದರಿಂದ ಈ ವರ್ಷ ಅದು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ ಪತ್ನಿ ವಿಜಯಲಕ್ಷ್ಮಿ ಜೊತೆ ಅವರು ವಿದೇಶಕ್ಕೆ ತೆರಳಿದ್ದರು. ಅಲ್ಲಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ದರ್ಶನ್ ಅವರು ಸಂಪೂರ್ಣ ಗುಣಮುಖರಾದ ಬಳಿಕ ಸಿನಿಮಾದ ಶೂಟ್ ಆರಂಭಿಸಲಿದ್ದಾರೆ.
ದರ್ಶನ್ಗೆ ನಟನೆಯ ‘ಕಾಟೇರ’ ಸಿನಿಮಾ ಕಳೆದ ಡಿಸೆಂಬರ್ ರಿಲೀಸ್ ಆಗಿ 200 ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು.
—–





Be the first to comment