ಡೆವಿಲ್

‘ಡೆವಿಲ್’ ಚಿತ್ರೀಕರಣ, ಡಬ್ಬಿಂಗ್ ಪೂರ್ಣ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಡೆವಿಲ್’ ಚಿತ್ರದ ಚಿತ್ರೀಕರಣ ಮತ್ತು ಡಬ್ಬಿಂಗ್ ಮುಕ್ತಾಯಗೊಂಡಿದೆ.

ಇತ್ತೀಚೆಗಷ್ಟೇ ಚಿತ್ರತಂಡ ಥಾಯ್ಲೆಂಡ್‌ನಲ್ಲಿ 10 ದಿನಗಳ ಚಿತ್ರೀಕರಣ ಪೂರ್ಣಗೊಳಿಸಿದೆ. ಬ್ಯಾಂಕಾಕ್‌ನಲ್ಲಿ 2  ಹಾಡಿನ ಚಿತ್ರೀಕರಣ ಪೂರ್ಣಗೊಂಡಿದೆ. ಇದರೊಂದಿಗೆ ಚಿತ್ರೀಕರಣ ಪೂರ್ಣಗೊಂಡಿದ್ದು ಡಬ್ಬಿಂಗ್ ಕೆಲಸವೂ ಮುಗಿದಿದೆ.

ಪ್ರಕಾಶ್ ವೀರ್ ನಿರ್ದೇಶನದ ‘ಡೆವಿಲ್’ ಚಿತ್ರವನ್ನು ಶ್ರೀ ಜೈಮಾತಾ ಕಂಬೈನ್ಸ್ ಬ್ಯಾನರ್  ನಿರ್ಮಿಸಿದೆ. ಬೆಂಗಳೂರು, ರಾಜಸ್ಥಾನ ಮತ್ತು ಬ್ಯಾಂಕಾಕ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣ ನಡೆದಿದೆ. ಶೀಘ್ರದಲ್ಲೇ ಚಿತ್ರತಂಡ ಚಿತ್ರ ಬಿಡುಗಡೆ ದಿನಾಂಕ ಘೋಷಿಸಲಿದೆ. ಚಿತ್ರದ ಪ್ರಚಾರದ ಭಾಗವಾಗಿ ಒಂದು ಹಾಡನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಚಿತ್ರತಂಡ ಹೇಳಿದೆ.

ದರ್ಶನ್‌ಗೆ ನಾಯಕಿಯಾಗಿ ರಚನಾ ರೈ ನಟಿಸಿದ್ದಾರೆ. ತುಳಸಿ, ಅಚ್ಯುತ್ ಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸ ಪ್ರಭು,  ಶುಭ್ ರಾಜ್  ನಟಿಸಿದ್ದಾರೆ. ‘ಡೆವಿಲ್’ ಸಿನಿಮಾ ಸಾಕಷ್ಟು ಸದ್ದು ಮಾಡುತ್ತಿದ್ದು, ಪೋಸ್ಟರ್‌ಗಳಲ್ಲಿ ದರ್ಶನ್ ಅವರ  ಲುಕ್ ಗಮನ ಸೆಳೆಯುತ್ತಿದೆ.

‘ಡೆವಿಲ್’ಗೆ ಸುಧಾಕರ್ ಎಸ್ ರಾಜ್ ಅವರು ಛಾಯಾಗ್ರಹಣ ಮತ್ತು ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಕಲಾ ನಿರ್ದೇಶಕ ಮೋಹನ್ ಬಿ ಕೆರೆ ಮತ್ತು ರಾಮ್-ಲಕ್ಷ್ಮಣ್ ಅವರ ಸಾಹಸ ಸಂಯೋಜನೆಯಿದೆ.

This Article Has 5 Comments
  1. Pingback: discount androxal purchase in the uk

  2. Pingback: Buy cheap enclomiphene no perscription

  3. Pingback: how to order xifaxan generic europe

  4. Pingback: cheap staxyn price netherlands

  5. Pingback: buy dutasteride purchase from uk

Leave a Reply

Your email address will not be published. Required fields are marked *

Translate »
error: Content is protected !!