ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡುತ್ತಿದ್ದಂತೆ ಡೆವಿಲ್ ಚಿತ್ರದ ಹಾಡು ಬಿಡುಗಡೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ದಿ ಡೆವಿಲ್’ ಚಿತ್ರದ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಎಂಬ ಹಾಡನ್ನು ಚಿತ್ರತಂಡ ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದು ಬಿಡುಗಡೆ ಮಾಡಲು ಯೋಜಿಸಿತ್ತು. ಈ ಹಾಡು ಅಭಿಮಾನಿಗಳಲ್ಲಿ ಸಖತ್ ಕ್ರೇಜ್ ಸೃಷ್ಟಿಸಿತ್ತು. ದರ್ಶನ್ ಅಭಿನಯದ ಡೆವಿಲ್ ಚಿತ್ರದ ಹಾಡಿಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಗಾಯದ ಮೇಲೆ ಬರೆ ಬಿದ್ದಿದೆ.
ಆಗಸ್ಟ್ 15ರಂದು ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ ಆಗಲಿದೆ ಎಂದು ಕೆಲವೇ ದಿನಗಳ ಹಿಂದಷ್ಟೇ ತಿಳಿಸಲಾಗಿತ್ತು. ಆದರೆ ಈಗ ಹಾಡು ಬಿಡುಗಡೆ ಮುಂದಕ್ಕೆ ಹೋಗಿದೆ ಎಂಬುದನ್ನು ಚಿತ್ರತಂಡವೇ ತಿಳಿಸಿದೆ.
ಈ ಕುರಿತು ಚಿತ್ರ ನಿರ್ಮಾಣ ಮಾಡುತ್ತಿರುವ ಶ್ರೀ ಜೈಮಾತಾ ಕಂಬೈನ್ಸ್ ಸಂಸ್ಥೆ ಟ್ವೀಟ್ ಮಾಡಿದ್ದು, ‘ಮೊದಲ ಹಾಡಿನ ಬಿಡುಗಡೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ’ ಎಂದು ತಿಳಿಸಿದೆ.
‘ಮಿಲನ’ ಖ್ಯಾತಿಯ ಪ್ರಕಾಶ್ ವೀರ್ ಅವರು ‘ದಿ ಡೆವಿಲ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ‘ಶ್ರೀ ಜೈಮಾತಾ ಕಂಬೈನ್ಸ್’ ಸಂಸ್ಥೆಯ ಮೂಲಕ ಸಿನಿಮಾ ನಿರ್ಮಾಣ ಆಗುತ್ತಿದೆ.
ರೇಣುಕಾಸ್ವಾಮಿ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಅರೆಸ್ಟ್ ಆದಾಗ ಡೆವಿಲ್ ಚಿತ್ರದ ಶೂಟಿಂಗ್ ನಿಂತಿತು. ಕೆಲವು ತಿಂಗಳ ಬಳಿಕ ಅವರು ಬೇಲ್ ಪಡೆದು ಹೊರಗೆ ಬಂದರು. ಬಳಿಕ ಚಿತ್ರೀಕರಣದಲ್ಲಿ ತೊಡಗಿಸಿಕೊಂಡರು. ದರ್ಶನ್ ಅವರು ನ್ಯಾಯಾಲಯದಿಂದ ಅನುಮತಿ ಪಡೆದು ಸಿನಿಮಾದ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಿದ್ದರು. ದರ್ಶನ್ ತಮ್ಮ ಪಾಲಿನ ಚಿತ್ರೀಕರಣವನ್ನು ಮುಗಿಸಿಕೊಟ್ಟಿದ್ದಾರೆ. ಡಬ್ಬಿಂಗ್ ಕೂಡ ಪೂರ್ಣಗೊಳಿಸಿದ್ದಾರೆ.





Pingback: how to buy androxal purchase no prescription
Pingback: ordering enclomiphene cheap mastercard
Pingback: buying xifaxan buy hong kong
Pingback: discount staxyn cheap fast shipping
Pingback: buying dutasteride without recipe
Pingback: buy fildena australia suppliers
Pingback: zahraniční nákup drog bez lékařského předpisu kamagra