ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ‘ದಿ ಡೆವಿಲ್’ ನ ಮೊದಲ ಹಾಡು ಆ.24ಕ್ಕೆ ಬೆಳಗ್ಗೆ 10.5 ಕ್ಕೆ ಗಂಟೆಗೆ ಬಿಡುಗಡೆಯಾಗುತ್ತಿದೆ.
ದರ್ಶನ್ ಅವರ ಸೋಷಿಯಲ್ ಮೀಡಿಯಾ ಅಕೌಂಟ್ ನ್ನು ಅವರ ಪತ್ನಿ ವಿಜಯಲಕ್ಷ್ಮಿ ನೋಡಿಕೊಳ್ಳುತ್ತಿದ್ದಾರೆ. ಅವರ ಸೋಷಿಯಲ್ ಮೀಡಿಯಾ ಖಾತೆಯಿಂದಲೇ ಹಾಡು ಬಿಡುಗಡೆ ವಿಷಯ ಹಂಚಿಕೊಂಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪ್ರಕಾರ ಮತ್ತೆ ಜೈಲು ಪಾಲಾಗಿರುವ ದರ್ಶನ್ ಜೈಲಿಗೆ ಹೋಗುವ ಚಿತ್ರೀಕರಣ ಮತ್ತು ಡಬ್ಬಿಂಗ್ ಕಾರ್ಯ ಮುಗಿಸಿಕೊಂಡಿದ್ದು ಚಿತ್ರತಂಡಕ್ಕೆ ಅನುಕೂಲವಾಗಿದೆ. ದರ್ಶನ್ ಅವರ ಅನುಪಸ್ಥಿತಿಯಲ್ಲಿ ಚಿತ್ರ ತೆರೆಗೆ ಬರಲು ಯಾವುದೇ ತೊಂದರೆಯಾಗದಂತೆ ತಂಡ ಕೆಲಸ ಮಾಡುತ್ತಿದೆ.
ಪ್ರಕಾಶ್ ವೀರ್ ನಿರ್ದೇಶನದ ‘ದಿ ಡೆವಿಲ್’ ಚಿತ್ರವನ್ನು ಡಿಸೆಂಬರ್ ನಲ್ಲಿ ಬಿಡುಗಡೆ ಮಾಡಲು ತಯಾರಕರು ಸಿದ್ಧತೆ ನಡೆಸಿದ್ದಾರೆ. ಗಣೇಶ ಹಬ್ಬದ ಸಮಯದಲ್ಲಿ ‘ದಿ ಡೆವಿಲ್’ ಬಿಡುಗಡೆ ದಿನಾಂಕವನ್ನು ಘೋಷಿಸುವ ನಿರೀಕ್ಷೆಯಿದೆ. ಶ್ರೀ ಜೈಮಾತಾ ಕಂಬೈನ್ಸ್ ಅದ್ದೂರಿ ಪ್ರಮಾಣದಲ್ಲಿ ನಿರ್ಮಿಸಿರುವ ಚಿತ್ರದಲ್ಲಿ ರಚನಾ ರೈ ನಾಯಕಿಯಾಗಿ ನಟಿಸಿದ್ದಾರೆ. ಶರ್ಮಿಳಾ ಮಾಂಡ್ರೆ, ಮಹೇಶ್ ಮಂಜ್ರೇಕರ್ ಮತ್ತು ಅಚ್ಯುತ್ ಕುಮಾರ್ ಪ್ರಮುಖ ಪಾತ್ರಗಳಲ್ಲಿದ್ದಾರೆ.
—-





Be the first to comment