ಆಗಸ್ಟ್ 20ಕ್ಕೆ ‘ಧಮಾಕ’ ಟ್ರೈಲರ್ ರಿಲೀಸ್

ಕಾಮಿಡಿ ಕಿಲಾಡಿಗಳು ಖ್ಯಾತಿಯ ಶಿವರಾಜ್ ಕೆ.ಆರ್. ಪೇಟೆ ನಟನೆಯ ‘ಧಮಾಕ’ ಚಿತ್ರದ ಟ್ರೈಲರ್ ಆಗಸ್ಟ್ 20ರಂದು ಬಿಡುಗಡೆ ಆಗಲಿದೆ.

ಈಗಾಗಲೇ ಬಹುತೇಕ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಟ್ರೈಲರ್ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದೆ. ಆಗಸ್ಟ್ 20ರಂದು ಸಂಜೆ 6:06ಕ್ಕೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಸಿನಿಮಾ ಟ್ರೈಲರ್ ರಿಲೀಸ್ ಆಗಲಿದೆ.

ಲಕ್ಷ್ಮಿ ರಮೇಶ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಶಿವರಾಜ್ ಕೆ.ಆರ್. ಪೇಟೆ, ಸಿದ್ದ ಮೂಲಿಮನಿ, ನಯನ ಹಾಗೂ ಪ್ರಿಯಾ ಆಚಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಎಸ್ ಆರ್ ಮೀಡಿಯಾ ಪ್ರೊಡಕ್ಷನ್ ಬ್ಯಾನರ್ ನಡಿ ಸುನಿಲ್ ಹಾಗೂ ಅನ್ನಪೂರ್ಣ ಬಿ ಪಾಟೀಲ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಿಕಾಸ್ ವಸಿಷ್ಠ ಸಂಗೀತ ನೀಡಿದ್ದಾರೆ.

‘ನಾನು ಮತ್ತು ಗುಂಡ’ ಚಿತ್ರದ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದ ಶಿವರಾಜ್ ಕೆ.ಆರ್. ಪೇಟೆ, ‘ಧಮಾಕ’ ಹಾಸ್ಯಭರಿತ ಚಿತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ತಯಾರಾಗಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!