ಮೊದಲ ಮಗುವಿನ ನಿರೀಕ್ಷೆಯಲ್ಲಿ ಧನಂಜಯ್

ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಅವರ ಪತ್ನಿ ಡಾ. ಧನ್ಯತಾ ಮೊದಲ ಮಗುವಿನ ನಿರೀಕ್ಷೆಯದ್ದು, ಪೋಟೋ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಸಂತಸದ ಕ್ಷಣವನ್ನು ದಂಪತಿ ಹಂಚಿಕೊಂಡಿದ್ದಾರೆ. “Our universe is expanding” ಎಂಬ ಭಾವನಾತ್ಮಕ ಸಂದೇಶದೊಂದಿಗೆ ಪೋಟೋ ಹಂಚಿಕೊಂಡಿದ್ದಾರೆ.

ದಂಪತಿಗಳು ಬಂಪ್ ಫೋಟೋಶೂಟ್ ಮೂಲಕ ಸುಂದರ ಕ್ಷಣಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಈ ಮೊದಲು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ಫೋಟೋ ಒಂದರಲ್ಲಿ ಧನ್ಯತಾ ಗರ್ಭಿಣಿಯಾಗಿರುವ ಸುಳಿವು ಸಿಕ್ಕಿತ್ತು. ಆದರೆ ದಂಪತಿ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿರಲಿಲ್ಲ.

ಡಾಲಿ ಧನಂಜಯ್ ಅವರು 2025ರ ಫೆಬ್ರವರಿಯಲ್ಲಿ ಮೈಸೂರಿನಲ್ಲಿ ಡಾ. ಧನ್ಯತಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆ ಕಾರ್ಯಕ್ರಮ ಆದ್ದೂರಿಯಾಗಿ ಆಯೋಜನೆ ಮಾಡಲಾಗಿತ್ತು.

ಬಂಪ್ ಶೂಟ್ ಪೋಟೋಗಳು ವೈರಲ್ ಆಗಿದ್ದು, ಅಭಿಮಾನಿಗಳು ದಂಪತಿಗೆ ಶುಭ ಹಾರೈಸಿದ್ದಾರೆ.
_

Be the first to comment

Leave a Reply

Your email address will not be published. Required fields are marked *

Translate »
error: Content is protected !!