ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಜೂನ್ 4 ರಂದು ಜಿಯೋ ಹಾಟ್ಸ್ಟಾರ್ನಲ್ಲಿ ಬಿಡುಗಡೆ ಆಗಲಿದೆ.
ಚಿತ್ರತಂಡ ಭಾರತದ ಹೊರಗೆ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆ ಮಾಡಿದ್ದು, ಭಾರತದಲ್ಲಿ ಸಿನಿಮಾವನ್ನು ಜಿಯೋ ಹಾಟ್ಸ್ಟಾರ್ನಲ್ಲಿ ವೀಕ್ಷಿಸಬಹುದಾಗಿದೆ. ‘ಧುರಂಧರ್ 2’ ನೆಟ್ಫ್ಲಿಕ್ಸ್ನಲ್ಲಿ ಈಗಾಗಲೇ ಬಿಡುಗಡೆ ಆಗಿದೆ. ಆದರೆ ಜಿಯೋ ಹಾಟ್ಸ್ಟಾರ್ನಲ್ಲಿ ಬಿಡುಗಡೆ ಆಗುವ ದಿನಾಂಕ ಖಾತ್ರಿ ಆಗಿರಲಿಲ್ಲ. ಇದೀಗ ಜಿಯೋ ಹಾಟ್ಸ್ಟಾರ್ ‘ಧುರಂಧರ್ 2’ ಸಿನಿಮಾದ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದೆ.
ಜಿಯೋ ಹಾಟ್ಸ್ಟಾರ್ನಲ್ಲಿ ಐಪಿಎಲ್ ನೇರ ಪ್ರಸಾರ ನಡೆಯುತ್ತಿದ್ದು, ಐಪಿಎಲ್ ಮುಗಿದ ಬಳಿಕ ಜಿಯೋ ಹಾಟ್ಸ್ಟಾರ್ ಸಿನಿಮಾ ಬಿಡುಗಡೆ ಮಾಡುವ ಯೋಜನೆ ಪ್ರಕಟಿಸಿದೆ.
‘ಧುರಂಧರ್ 2’ ಸಿನಿಮಾ ಜೂನ್ 4 ರಂದು ಒಟಿಟಿಯಲ್ಲಿ ಬಿಡುಗಡೆ ಆಗಲಿದೆ. ಅದೇ ದಿನ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.
ಭಾರತದ ಗೂಢಚಾರಿಯ ಕತೆ ಒಳಗೊಂಡಿರುವ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ 1,800 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಸಿನಿಮಾದಲ್ಲಿ ರಣ್ವೀರ್ ಸಿಂಗ್ ಜೊತೆಗೆ ಆರ್ ಮಾಧವನ್, ಅಕ್ಷಯ್ ಖನ್ನಾ, ಅರ್ಜುನ್ ರಾಂಪಾಲ್, ಸಂಜಯ್ ದತ್ ನಟಿಸಿದ್ದಾರೆ.
——





Be the first to comment