ರಮೇಶ್ ಅರವಿಂದ್ ಅವರ ದೈಜಿ ಸಿನಿಮಾದಲ್ಲಿ ದಿಗಂತ್ , ರಮೇಶ್ ಅರವಿಂದ್ ಅವರ ತಮ್ಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ದೈಜಿ ಶೂಟಿಂಗ್ ನಡೆಯುತ್ತಿದ್ದು ಶೇಕಡ 50 ರಷ್ಟು ಚಿತ್ರೀಕರಣ ಮುಕ್ತಾಯಗೊಂಡಿದೆ. ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ಸೂರ್ಯ ಹೆಸರಿನ ಪಾತ್ರ ಇದೆ. ದೀಗ ರಮೇಶ್ ಅರವಿಂದ್ ಮತ್ತೊಮ್ಮೆ ಸೂರ್ಯ ಹೆಸರಿನ ರೋಲ್ ಮಾಡುತ್ತಿದ್ದಾರೆ. ದಿಗಂತ್ ಅವರು ಗಗನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಧಿಕಾ ನಾರಾಯಣ್ ಅವರು ಭೂಮಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಶಿವಾಜಿ ಸುರತ್ಕಲ್ ಖ್ಯಾತಿಯ ಆಕಾಶ್ ಶ್ರೀವತ್ಸ ಅವರು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಛಾಯಾಗ್ರಹಣ ಶ್ರೀಶಾ ಕುದುವಳ್ಳಿ ಅವರು ಮಾಡುತ್ತಿದ್ದಾರೆ. ಈ ಚಿತ್ರವನ್ನು ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ರವಿ ಕಶ್ಯಪ್ ನಿರ್ಮಿಸುತ್ತಿದ್ದಾರೆ. ಇದಕ್ಕೂ ಮುಂಚೆ ಕಾನ್ಸ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ತೆರೆ ಕಂಡ ಕಿರು ಚಿತ್ರ ಸುಳ್ಳೇ ಸತ್ಯ, ಪವನ್ ಕುಮಾರ್ ಅವರ ‘ಲೂಸಿಯಾ’, ಡಾಲಿ ಧನಂಜಯ್ ಅವರು ನಟಿಸಿದ ‘ಭದ್ಮಾಷ್’ ಇದೇ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿದ್ದವು.
‘ಅಮೆರಿಕ ಅಮೆರಿಕ’ ಚಿತ್ರದಂತೆಯೇ ಇದೂ ಕೂಡ ಬಹುತೇಕ ಅಮೆರಿಕದಲ್ಲಿಯೇ ನಡೆಯುವ ಕಥೆ. ಚಿತ್ರವು ಸಂಪೂರ್ಣವಾಗಿ ಅಮೆರಿಕದಲ್ಲಿ ಚಿತ್ರೀಕರಣವಾಗಲಿದೆ. ಚಿತ್ರವು ಮಿಸ್ಟರಿ ಅಥವಾ ಹಾರರ್ ಜ಼ಾನರ್‌ಗೆ ಬರುತ್ತದೆ.
ಇದು ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲೂ ನಟಿಸಿ ಸೈ ಎನಿಸಿಕೊಂಡ ನಟ ಶ್ರೀ ರಮೇಶ್ ಅರವಿಂದ ರವರ 106ನೇ ಚಿತ್ರವಾಗಲಿದೆ.
—-

Be the first to comment