“ದಿಲ್ ಪಸಂದ್” ಫಸ್ಟ್ ಲುಕ್ ಗೆ ಸಿನಿರಸಿಕ ಫಿದಾ

ರಶ್ಮಿ ಫಿಲಂಸ್ ಲಾಂಛನದಲ್ಲಿ ಸುಮಂತ್ ಕ್ರಾಂತಿ ಅವರು ನಿರ್ಮಿಸುತ್ತಿರುವ “ದಿಲ್ ಪಸಂದ್” ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಚಿತ್ರದ ಫಸ್ಟ್ ಲುಕ್ ಗೆ  ಜನಮನ್ನಣೆ ದೊರಕಿದೆ.‌

ಶಿವತೇಜಸ್ ನಿರ್ದೇಶನದ ಈ‌ ಚಿತ್ರದ ನಾಯಕರಾಗಿ ‌ಡಾರ್ಲಿಂಗ್ ಕೃಷ್ಣ ಅಭಿನಯಿಸಿಸುತ್ತಿದ್ದಾರೆ. ನಿಶ್ವಿಕನಾಯ್ಡು‌ ಹಾಗೂ ಮೇಘ ಶೆಟ್ಟಿ “ದಿಲ್ ಪಸಂದ್”ನ ನಾಯಕಿಯರು. ಸಾಧುಕೋಕಿಲ,‌‌ ರಂಗಾಯಣ ರಘು, ತಬಲ‌ ನಾಣಿ, ಅರುಣ ಬಾಲರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಈಗಾಗಲೇ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಡಿಸೆಂಬರ್ ಮೊದಲ ವಾರದಲ್ಲಿ ದ್ವಿತೀಯ ಹಂತದ ‌ಚಿತ್ರೀಕರಣ‌ ಆರಂಭವಾಗಲಿದೆ.

ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಶೇಖರ್ ಚಂದ್ರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಸಾಹಸ ನಿರ್ದೇಶನ ಚಿತ್ರಕ್ಕಿದೆ.
———

Be the first to comment

Leave a Reply

Your email address will not be published. Required fields are marked *

Translate »
error: Content is protected !!