ಮಲ್ಲಿಕಾರ್ಜುನ್ ಒಬ್ಬ ಫ್ರಾಡ್ ಎಂದ ದಿನಕರ್

ಮಲ್ಲಿಕಾರ್ಜುನ್ ನನ್ನ, ದರ್ಶನ್ ಹೆಸರನ್ನು ಮತ್ತು ನಮ್ಮ ತೂಗುದೀಪ ಸಂಸ್ಥೆ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದಿನಕರ್ ತೂಗುದೀಪ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲ್ಲಿಕಾರ್ಜುನ್ ಗದಗ ಅಲಿಯಾಸ್ ಚೀಟರ್ ಮಲ್ಲು. ಈತ ಫ್ರಾಡ್. ಎಂಟು ವರ್ಷಗಳ ಹಿಂದೆ ನಮಗೂ ಹಣಕಾಸಿನಲ್ಲಿ ಮೋಸ ಮಾಡಿದ್ದಾರೆ ಎಂದು ದಿನಕರ್ ಆರೋಪಿಸಿದ್ದಾರೆ.

ದರ್ಶನ್ ಮಾಜಿ ಮ್ಯಾನೇಜರ್ ಬಗ್ಗೆ ದಿನಕರ್ ತೂಗುದೀಪ್ ತಮ್ಮ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಪೋಸ್ಟ್ ಮಾಡಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ತನಗೆ ಏನೇನೆಲ್ಲಾ ಆಯಿತು ಎಂದು ಹೇಳುತ್ತಿರುವ ಈತ ತನ್ನಿಂದ ಯಾರಿಗೆಲ್ಲ ಏನು ಅನಾಹುತ ಆಯಿತು ಎಂದು ಹೇಳಿರುವುದಿಲ್ಲ. ಈತ ಮಹಾ ಮೋಸಗಾರ. ಪತ್ರಿಕಾಗೋಷ್ಠಿಯಲ್ಲಿ ತನ್ನ ಲಾಭಕ್ಕೆ ತಕ್ಕಂತೆ ಪದೇ ಪದೇ ನಮ್ಮ ತೂಗುದೀಪ ಸಂಸ್ಥೆಯ ಹೆಸರು, ದರ್ಶನ್ ಅವರ ಹೆಸರು ಮತ್ತು ನನ್ನ ಹೆಸರನ್ನು ದುರ್ಬಳಕೆ ಮಾಡಿದ್ದಾನೆ ಎಂದಿದ್ದಾರೆ.

ನಮ್ಮ ನಂಬಿಕೆಗೆ ದ್ರೋಹ ಮಾಡಿರುವ ಮೋಸಗಾರ ಇವನು. ಮೋಸ ಮಾಡುವ ಮುನ್ನ ಈತ ಬಳಸುವ ದಾಳವೇ ಸಿಂಪತಿ. ಅದನ್ನು ಪಡೆಯಲು ಈತ ಹೇಳುವುದೇ ಕಟ್ಟು ಕತೆಗಳು. ಇವನನ್ನು ಯಾರೂ ನಂಬಬೇಡಿ. ನಾನಾಗಲಿ, ನಮ್ಮ ತೂಗುದೀಪ ಸಂಸ್ಥೆ, ದರ್ಶನ್ ಅವರು ಯಾರೂ ಈತನನ್ನು ಸೇರಿಸುವುದಿಲ್ಲ. ಈ ನಂಬಿಕೆ ದ್ರೋಹಿಗೂ ನಮಗೂ ಯಾವುದೇ ಸಂಬಂಧವಿರುವುದಿಲ್ಲ ಎಂದಿದ್ದಾರೆ.

ಈತ ಎಲ್ಲಾದರೂ ನಮ್ಮ ಒಡನಾಟದ ಬಗ್ಗೆ ಹೇಳಿಕೊಂಡು ಲಾಭ ಮಾಡಲು ಬಂದರೆ ಯಾಮಾರಬೇಡಿ. ದರ್ಶನ್ ಅವರ ಹೆಸರನ್ನು ಬಳಸಿ ದುಡ್ಡು ಮಾಡುವ ಇನ್ನೊಂದು ಹುನ್ನಾರವಷ್ಟೇ. ದಯವಿಟ್ಟು ಯಾರೂ ಇವನ ಮಾತನ್ನು ನಂಬಿ ಮೋಸ ಹೋಗಬೇಡಿ. ಇಂತಿ ನಿಮ್ಮ, ದಿನಕರ್ ತೂಗುದೀಪ ಎಂದು ಅವರು ಪೋಸ್ಟ್ ಮಾಡಿದ್ದಾರೆ.

ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಹಲವು ವರ್ಷಗಳ ನಂತರ ಕೆಲ ದಿನಗಳ ಹಿಂದೆ ಹಠಾತ್ ಸಾರ್ವಜನಿಕವಾಗಿ ಕಾಣಿಸಿಕೊಂಡು ಹಲವು ವಿಚಾರ ಹಂಚಿಕೊಂಡಿದ್ದರು.

ಈಗ ದರ್ಶನ್ ಸಹೋದರ ಅವರ ಬಗ್ಗೆ ಮಾತನಾಡಿದ್ದಾರೆ

Be the first to comment

Leave a Reply

Your email address will not be published. Required fields are marked *

Translate »
error: Content is protected !!