ಕರೋನಾ ಸಂಕಷ್ಟದ ಈ ಸಮಯದಲ್ಲಿ ಜನರು ಜೀವನ ನಡೆಸುವುದಕ್ಕೆ ತುಂಬಾ ಕಷ್ಟಕರವಾಗಿದೆ. ಇoತಹ ಪರಿಸ್ಥಿತಿಯನ್ನ ಅರಿತ ನಿರ್ದೇಶಕ ಹಾಗೂ ನಿರ್ಮಾಪಕರಾದ ಆರ್. ಚoದ್ರು ಉತ್ತಮ ಕೆಲಸವನ್ನು ಮಾಡಿದ್ದಾರೆ.
ಎಷ್ಟೋ ಜನ ತಾವು ಹುಟ್ಟಿಬೆಳೆದ ಊರನ್ನು ತಾವು ಬೆಳೆದ ಮೇಲೆ ಮರೆಯುವುದುಂಟು. ಆದರೆ ಕೆಲವರು ಮಾತ್ರ ತಮ್ಮೂರಿನ ಜನರ ಕಷ್ಟಕ್ಕೆ ಸ್ಪಂದಿಸುವ ಗುಣವಿರುತ್ತದೆ. ಕನ್ನಡ ಚಲನಚಿತ್ರರಂಗದಲ್ಲಿ ತಮ್ಮದೇ ಹೆಸರು ಮಾಡಿರುವ ನಿರ್ದೇಶಕ ಆರ್ .ಚಂದ್ರು ಕೊರೋನಾ ಸಂಕಷ್ಟ ಸಮಯದಲ್ಲಿ ಉತ್ತಮ ಕಾರ್ಯ ಮಾಡಿದ್ದು, ಚಲನಚಿತ್ರ ಕ್ಷೇತ್ರವಲ್ಲದೇ ತಾವು ಹುಟ್ಟಿ ಬೆಳೆದ ಚಿಕ್ಕಬಳ್ಳಾಪುರ ಕೇಶಾವರ ಗ್ರಾಮದ ಸುಮಾರು ಸಾವಿರ ಮನೆಗಳಿಗೆ 25 ಕೆಜಿಯ ಅಕ್ಕಿ ಮೂಟ್ಟೆ ನೀಡಿದ್ದಾರೆ.
ನಾನು ರೈತನ ಮಗ. ಕೊರೋನ ಸಂಕಷ್ಟದ ಕಾಲದಲ್ಲಿ ನನ್ನೂರಿನವರಿಗೆ ನೆರವಾಗುವುದು ನನ್ನ ಧರ್ಮ ಇಂದು ಮತ್ತು ಎಂದೆಂದಿಗೂ ನಾನು ಮಣ್ಣಿನ ಋಣ ತೀರಿಸಲು ಮುಂದಾಗಿರುತ್ತೇನೆ ಎನ್ನುತ್ತಾರೆ.
Be the first to comment