ವಿಚ್ಛೇದನಕ್ಕೆ ಅರ್ಜಿ ಹಾಕಿದ ರನ್ಯಾ ಪತಿ

ಆಕ್ರಮವಾಗಿ ಚಿನ್ನ ಸಾಗಾಣೆ ಪ್ರಕರಣದ ಆರೋಪಿ  ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಗೆ ಗಂಡ ಶಾಕ್ ಕೊಟ್ಟಿದ್ದು, ವಿಚ್ಚೇದನಕ್ಕೆ ಅರ್ಜಿ ಹಾಕಿದ್ದಾರೆ.

ರನ್ಯಾ ಪತಿ ಜತೀನ್ ಹುಕ್ಕೇರಿ ಅವರು  ಫ್ಯಾಮಿಲಿ ಕೋರ್ಟ್‌ನಲ್ಲಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇನ್ನೂ ಕೋರ್ಟ್ ನಂಬರಿಂಗ್ ಆಗಿಲ್ಲ. ಈಗಾಗಲೇ ವೈವಾಹಿಕ ಜೀವನದಲ್ಲಿ ಸಾಕಷ್ಟು ಜಗಳ ಆಗಿದೆ  ಅಂತ ಹೇಳಿಕೊಂಡಿದ್ದ ಜತೀನ್ ಹುಕ್ಕೇರಿ ಈಗ ವಿಚ್ಚೇದನಕ್ಕೆ ಮೊರೆ ಹೋಗಿದ್ದಾರೆ.

ಅಕ್ಟೋಬರ್ 6, 2024 ರಂದು ಬೆಂಗಳೂರಿನ ಬಾಸ್ಟಿನ್ ರೆಸ್ಟೋರೆಂಟ್​ನಲ್ಲಿ ರನ್ಯಾ, ಜತಿನ್​ ಇಬ್ಬರೂ ಮದುವೆ ಬ್ರೋಕರ್ ಮೂಲಕ ಭೇಟಿಯಾಗಿದ್ದರು.   ಅಕ್ಟೋಬರ್ 23ರಂದು ರನ್ಯಾ, ಜತಿನ್ ಎಂಗೇಜ್ ಮೆಂಟ್ ಆಗಿತ್ತು. ನವೆಂಬರ್ 27 ರಂದು ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ಮದುವೆ   ಆಗಿತ್ತು. ಬಳಿಕ ಲ್ಯಾವೆಲ್ಲೆ ರಸ್ತೆಯ ಅಪಾರ್ಟ್ ಮೆಂಟ್​ನಲ್ಲಿ ಬಾಡಿಗೆ ಮನೆಯಲ್ಲಿ ಅವರು ವಾಸ್ತವ್ಯ ಹೂಡಿದ್ದರು.

ಮದುವೆಯಾದ ಒಂದೇ ತಿಂಗಳಿಗೆ ರನ್ಯಾ, ಜತಿನ್ ನಡುವೆ ಮನಸ್ತಾಪ ಶುರುವಾಗಿದ್ದು, ಸಂಬಂಧದಲ್ಲಿ ಪಾರದರ್ಶಕತೆ ಇಲ್ಲ, ಮಾತುಕತೆಯೂ ಇರಲಿಲ್ಲವೆಂದು  ಜತಿನ್ ಹುಕ್ಕೇರಿ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ದುಬೈನಿಂದ ಬೆಂಗಳೂರಿಗೆ   ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ರನ್ಯಾ ರಾವ್‌ ಬಂಧನಕ್ಕೊಳಗಾಗಿದ್ದು,  ವಿಚ್ಚೇದನದ ಸಂಕಷ್ಟ ಎದುರಾಗಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!