Sowmya jaganmurthy ‘ಡಾಲರ್ಸ್ ಪೇಟೆ’ ಕ್ಯಾರೆಕ್ಟರ್ ಪೋಸ್ಟರ್ ರಿವೀಲ್

‘ಡಾಲರ್ಸ್ ಪೇಟೆ’ ಚಿತ್ರತಂಡ ಚಿತ್ರದ ಕ್ಯಾರೆಕ್ಟರ್ ಪೋಸ್ಟರ್ ರಿವೀಲ್ ಮಾಡಿ ಕ್ಯೂರಿಯಾಸಿಟಿ ಹುಟ್ಟು ಹಾಕಿದೆ.

ಹೈಪರ್ ಲಿಂಕ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಈ ಚಿತ್ರದಲ್ಲಿ ಲೂಸಿಯ ಖ್ಯಾತಿಯ ನಿರ್ದೇಶಕ ಪವನ್ ಪತ್ನಿ ಸೌಮ್ಯ ಜಗನ್ ಮೂರ್ತಿ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಅವರ ಕ್ಯಾರೆಕ್ಟರ್ ಪೋಸ್ಟರ್ ಚಿತ್ರತಂಡ ರಿವೀಲ್ ಮಾಡಿದೆ.

ಚಿತ್ರದಲ್ಲಿ ಸೌಮ್ಯ ಜಗನ್ ಮೂರ್ತಿ ಕ್ಯಾಶಿಯರ್ ಪಾತ್ರವನ್ನು ನಿರ್ವಹಿಸಿದ್ದು, ಬಿಡುಗಡೆಯಾಗಿರುವ ಕ್ಯಾರೆಕ್ಟರ್ ಪೋಸ್ಟರ್ ಕ್ಯೂರಿಯಾಸಿಟಿ ಹುಟ್ಟು ಹಾಕಿದೆ. ಮುಂದಿನ ದಿನಗಳಲ್ಲಿ ಉಳಿದ ಕಲಾವಿದರ ಪೋಸ್ಟರ್ ಬಿಡುಗಡೆ ಮಾಡೋದಾಗಿ ಚಿತ್ರತಂಡ ತಿಳಿಸಿದೆ.

ಚಿತ್ರದಲ್ಲಿ ಸೌಮ್ಯ ಜಗನ್ ಮೂರ್ತಿ, ಆಕರ್ಷ್ ಕಮಲ, ವೆಂಕಟ್ ರಾಜು ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಪೃಥ್ವಿ ಅಂಬರ್ ಗೆಸ್ಟ್ ಅಪಿಯರೆನ್ಸ್ ಚಿತ್ರದಲ್ಲಿದೆ. ಉಳಿದಂತೆ ಕುಶಾಲ್.ಎಸ್, ದತ್ತು, ರಾಘವೇಂದ್ರ, ಹೊನ್ನವಳ್ಳಿ, ಡ್ರಾಮಾ ಜೂನಿಯರ್ಸ್ ಮಹೇಂದ್ರ ಒಳಗೊಂಡ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಸೂರಜ್ ಜೋಯಿಸ್ ಸಂಗೀತ ನಿರ್ದೇಶನ, ಆನಂದ್ ಸುಂದರೇಶ ಕ್ಯಾಮೆರಾ ವರ್ಕ್, ಮಹೇಶ್ ತೊಗಟ್ಟ ಸಂಕಲನ, ಅರ್ಜುನ್ ರಾಜ್ ಮತ್ತು ನರಸಿಂಹ ಸಾಹಸ ನಿರ್ದೇಶನ ಹಾಗೂ ದೀಕ್ಷಿತ್ ಕುಮಾರ್ ನೃತ್ಯ ನಿರ್ದೇಶನ ಚಿತ್ರಕ್ಕಿದೆ. ಪೆಂಟ್ರಿಕ್ಸ್ ಎಂಟಟೈನ್ಮೆಂಟ್ಸ್ ಬ್ಯಾನರ್ ನಡಿ ಪೂಜಾ.ಟಿ.ವೈ ‘ಡಾಲರ್ಸ್ ಪೇಟೆ’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಈ ಚಿತ್ರದ ಮೂಲಕ ‘ಮಾರ್ಫಿ’, ‘ಮದಗಜ’ ಚಿತ್ರಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಮೋಹನ್ ಎನ್ ಮುನಿ ನಾರಾಯಣಪ್ಪ ನಿರ್ದೇಶಕನಾಗಿ ಬಡ್ತಿ ಪಡೆದಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!