ಕೆಂಪೇಗೌಡರ ಪಾತ್ರದಲ್ಲಿ ಡಾಲಿ: ಪೋಸ್ಟರ್ ಬಿಡುಗಡೆ

ನಾಡಪ್ರಭು ಕೆಂಪೇಗೌಡರ ಜೀವನ ಕುರಿತ ಸಿನಿಮಾದಲ್ಲಿ ಕೆಂಪೇಗೌಡರ ಪಾತ್ರದಲ್ಲಿ ಡಾಲಿ ಧನಂಜಯ್ ನಟಿಸಲಿದ್ದಾರೆ. ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿದ್ದು ಗಿರಿಜಾ ಮೀಸೆ, ತಿಲಕ ಇಟ್ಟು ಧನಂಜಯ್ ಖಡಕ್ ಆಗಿ ಕಾಣುತ್ತಿದ್ದಾರೆ.

ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಸಿನಿಮಾ ಸೆಟ್ಟೇರಲು ಸಜ್ಜಾಗಿದ್ದು,  ಸಿನಿಮಾವನ್ನು ಅನುಭವಿ ನಿರ್ದೇಶಕ ಟಿಎಸ್ ನಾಗಾಭರಣ ನಿರ್ದೇಶನ ಮಾಡಲಿದ್ದಾರೆ. ಸಿನಿಮಾವನ್ನು ಎಂಎನ್ ಶಿವರುದ್ರಪ್ಪ, ಶುಭಂ ಗುಂಡಾಲ ನಿರ್ಮಾಣ ಮಾಡುತ್ತಿದ್ದಾರೆ.

‘ನಾಡಪ್ರಭು ಕೆಂಪೇಗೌಡ’ ಸಿನಿಮಾಕ್ಕೆ ನಾಗಾಭರಣ  ಚಿತ್ರಕತೆ ಬರೆದಿದ್ದು, ಸಾಹಿತಿ ಪ್ರತಿಭಾ ನಂದಕುಮಾರ್ ಅವರು ಬರವಣಿಗೆಯಲ್ಲಿ ಸಹಾಯ ಮಾಡಲಿದ್ದಾರೆ. ನಾಗಾಭರಣ ಅವರ ಪುತ್ರ ನಿರ್ದೇಶಕ ಪನ್ನಗಾಭರಣ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಲಿದ್ದಾರೆ. ಸಂಗೀತವನ್ನು ವಾಸುಕಿ ವೈಭವ್ ನೀಡಲಿದ್ದಾರೆ. ಶಶಿಧರ ಅಡಪ ಅವರು ಸಿನಿಮಾದ ಸೆಟ್ ನಿರ್ಮಾಣ ನೋಡಿಕೊಳ್ಳಲಿದ್ದಾರೆ.

ಧನಂಜಯ್​ ಈ ಹಿಂದೆ ಅಲ್ಲಮನ ಕುರಿತಾದ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರು ಕೆಂಪೇಗೌಡ ಆಗಲಿದ್ದಾರೆ. ಐತಿಹಾಸಿಕ ಪಾತ್ರಕ್ಕಾಗಿ  ಧನಂಜಯ್  ವಿಶೇಷ ತಯಾರಿ ಮಾಡಿಕೊಳ್ಳಲಿದ್ದಾರೆ.

ಈ ಹಿಂದೆ ದಿನೇಶ್ ಬಾಬು ಅವರು ನಾಡಪ್ರಭು ಕೆಂಪೇಗೌಡರ ಸಿನಿಮಾ ಮಾಡುವುದಾಗಿ ಘೋಷಿಸಿದ್ದರು. ‘ಧರ್ಮಬೀರು ನಾಡಪ್ರಭು ಕೆಂಪೇಗೌಡ’ ಸಿನಿಮಾ ಟೈಟಲ್ ಘೋಷಿಸಿದ್ದರು. ಆದರೆ ಅದಕ್ಕೆ ನಾಗಾಭರಣ ನ್ಯಾಯಾಲಯದ ಮೂಲಕ ತಡೆ ತಂದರು. ನಾಗಾಭರಣ ಕೆಂಪೇಗೌಡರ ಕುರಿತಾದ ಸಿನಿಮಾಕ್ಕಾಗಿ ಟೈಟಲ್ ರಿಜಿಸ್ಟ್ರೇಷನ್ ಸಹ ಮಾಡಿಸಿದ್ದರು.

——

Be the first to comment

Leave a Reply

Your email address will not be published. Required fields are marked *

Translate »
error: Content is protected !!