ರಮ್ಯಾ ಜೊತೆ ತೆರೆ ಹಂಚಿಕೆಗೆ ಡಾಲಿ ಹರ್ಷ

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರ ಜೊತೆ ಚಿತ್ರ ಮಾಡುತ್ತಿರುವುದಕ್ಕೆ ಡಾಲಿ ಧನಂಜಯ ಹರ್ಷ ವ್ಯಕ್ತ ಪಡಿಸಿದ್ದಾರೆ.

ಉತ್ತರ ಕಾಂಡ ಮುಹೂರ್ತ ಬಳಿಕ ಸಾಮಾಜಿಕ ಜಾಲ ತಾಣದಲ್ಲಿ ಧನಂಜಯ ತಮ್ಮ ಅಭಿಪ್ರಾಯ ಹೇಳಿದ್ದಾರೆ.

ಒಂದೇ ದಿಕ್ಕಿನಲ್ಲಿ ಆಲೋಚಿಸುವವರು ಒಟ್ಟಿಗೆ ಸೇರಿ, ನಿಸ್ವಾರ್ಥವಾಗಿ ಸಿನಿಮಾಕ್ಕಾಗಿ, ಒಬ್ಬರು ಇನ್ನೊಬ್ಬರಿಗಾಗಿ contribute ಮಾಡಿದಾಗ ಅದ್ಭುತಗಳು ಸಂಭವಿಸುತ್ತವೆ ಎಂದು ನಾನು ನಂಬಿದ್ದೇನೆ. ಅದೆ ರೀತಿ ಆಗಿದ್ದು, ಮೈಲಿಗಲ್ಲಾಗಿದ್ದು “ರತ್ನನ್ ಪ್ರಪಂಚ” . ರೋಹಿತ್ ಪದಕಿಯಂತ ನಿರ್ದೇಶಕ ಘಟನ ಜೊತೆ ಎರಡನೆ ಪ್ರಯತ್ನ, ಕಾರ್ತಿಕ್ ಹಾಗು ಯೋಗಿ ಯಂತ ನಿರ್ಮಾಪಕ ಘಟರ ಜೊತೆ ಸತತವಾಗಿ ಮೂರನೆ ಪ್ರಯತ್ನ, ಇನ್ನೊಂದು ಮೈಲಿಗಲ್ಲಿನ ಕಡೆ ಮತ್ತೊಂದು ದಿಟ್ಟ ಹೆಜ್ಜೆ “ಉತ್ತರಕಾಂಡ” ಆಗಿದೆ ಎಂದಿದ್ದಾರೆ.

If I have seen further, it is by standing on the shoulders of of giants – Isaac Newton

Very happy to associate with these giants again.

ಹಾಗೆ ನಮ್ಮ sandalwood queen ರಮ್ಯ ಅವರ ಜೊತೆ screen share ಮಾಡುವ ಕನಸು ಈ ಸಿನಿಮಾದ ಮೂಲಕ ಕೈಗೂಡುತ್ತಿದೆ. ಇದು ಮತ್ತೊಂದು ಖುಷಿಯ ವಿಚಾರ ಎಂದು ಹೇಳಿದ್ದಾರೆ.

ಪ್ರತಿ ಬಾರಿ ನನ್ನ ಪರವಾಗಿ ನಿಂತು ಯುದ್ಧ ಮಾಡುವ ಮಾಧ್ಯಮ ಮಿತ್ರರು, ನನ್ನ ಮೇಲೆ ನಂಬಿಕೆಯಿಟ್ಟು ನನ್ನ ಶಕ್ತಿಯಾಗಿ ನಿಂತಿರುವ ಕನ್ನಡ ಕುಲಕೋಟಿಗೆ ನನ್ನ ಹೃದಯಪೂರ್ವಕ ನಮನಗಳು. ಹೀಗೆ ಜೊತೆಗಿರಿ, ತಪ್ಪಾದಾಗ ತಿದ್ದಿ, ಗೆಲುವಾಗುವಂತೆ ಹರಸಿ, ಮೆರೆಸಿ ಎಂದು ಅವರು ಕೋರಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!