ಡಾಲಿ ಧನಂಜಯ್ ಅವರ ಡಾಲಿ ಪಿಕ್ಚರ್ಸ್‌ನಿಂದ ‘ಹೆಗ್ಗಣ ಮುದ್ದು’ ಹೆಸರಿನ ಹೊಸ ಸಿನಿಮಾ ಘೋಷಣೆಯಾಗಿದೆ.
ಡಾಲಿಯ ಆಪ್ತ ಮಿತ್ರ ಮೈಸೂರು ಪೂರ್ಣ ಈ ಸಿನಿಮಾದ ನಾಯಕನಾಗಿ ನಟಿಸಿದ್ದಾರೆ. ನಾಯಕಿಯಾಗಿ ಅರುಣ್ ಸಾಗರ್ ಅವರ ಪುತ್ರಿ ಅದಿತಿ ಸಾಗರ್ ಅಭಿನಯಿಸಿದ್ದಾರೆ. ಶಿವರಾಜ್ ಕುಮಾರ್ ನಟನೆಯ ‘ವೇದ’ ಸಿನಿಮಾದಲ್ಲಿ ಅದಿತಿ ಸಾಗರ್ ನಟಿಸಿ ಗಮನ ಸೆಳೆದಿದ್ದಾರೆ.
ಅವಿನಾಶ್ ಬಳೆಕ್ಕಳ ಈ ಸಿನಿಮಾವನ್ನು ನಿರ್ದೇಶಿಸಿದ್ದು, ಇದು ಅವರ ಮೊದಲ ನಿರ್ದೇಶನದ ಚಿತ್ರ. ‘ಹೆತ್ತವರಿಗೆ ಹೆಗ್ಗಣ ಮುದ್ದು’ ಎಂಬ ಗಾದೆಯಿಂದ ಸ್ಪೂರ್ತಿ ಪಡೆದ ಈ ಸಿನಿಮಾ, ವ್ಯಕ್ತಿ ಕುದುರೆಯೋ ಅಥವಾ ಹೆಗ್ಗಣವೋ ಎಂಬ ಪ್ರಶ್ನೆಯ ಸುತ್ತ ಕಥೆ ಸಾಗುತ್ತದೆ. ಚಿತ್ರೀಕರಣ ಪೂರ್ಣಗೊಂಡಿರುವ ‘ಹೆಗ್ಗಣ ಮುದ್ದು’ ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ.
‘ಹೆಗ್ಗಣ ಮುದ್ದು’ಡಾಲಿ ಧನಂಜಯ್ ನಿರ್ಮಿಸುತ್ತಿರುವ ಆರನೇ ಸಿನಿಮಾ ಆಗಿದೆ. ತಮ್ಮ ನಿರ್ಮಾಣದ ಸಿನಿಮಾಗಳಲ್ಲಿ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಡಾಲಿ ಈ ಸಿನಿಮಾದಲ್ಲೂ ನಟಿಸುವ ಸಾಧ್ಯತೆ ಇದೆ.
ಡಾಲಿ ಧನಂಜಯ್ ಅವರ ಕೊನೆಯ ಸಿನಿಮಾ ಬಿಡುಗಡೆಯಾಗಿ ಎರಡು ವರ್ಷಕ್ಕೂ ಹೆಚ್ಚು ಕಾಲ ಕಳೆದಿದೆ. ಡಾಲಿ ನಾಲ್ಕು ಸಿನಿಮಾಗಳಲ್ಲಿ ನಟಿಸುತ್ತಿದ್ದರೂ, ಅವುಗಳ ಬಿಡುಗಡೆಯ ದಿನಾಂಕ ಇನ್ನೂ ಘೋಷಿಸಿಲ್ಲ.
—-





Be the first to comment