ಮಲಯಾಳಂ ಸೂಪರ್ ಸ್ಟಾರ್ ಮೋಹನ್ಲಾಲ್ ಅಭಿನಯದ ‘ದೃಶ್ಯಂ 2’ ಸಿನಿಮಾ ಥಿಯೇಟರ್ನಲ್ಲಿ ನಿರೀಕ್ಷೆಗಿಂತ ಕಡಿಮೆ ಗಳಿಕೆ ಮಾಡಿ ಹಿನ್ನಡೆ ಅನುಭವಿಸಿದೆ.
ಕೇರಳದಲ್ಲಿ ಮರು ಬಿಡುಗಡೆಗೊಂಡ ಚಿತ್ರ ಕೇವಲ 3.5 ಲಕ್ಷ ರೂಪಾಯಿ ಗಳಿಕೆ ಮಾಡಿರುವುದು ಚಿತ್ರತಂಡಕ್ಕೆ ಶಾಕ್ ನೀಡಿದೆ. ಜೀತು ಜೊಸೆಫ್ ನಿರ್ದೇಶನದ ಈ ಚಿತ್ರ ಕೋವಿಡ್ ಸಮಯದಲ್ಲಿ ನೇರವಾಗಿ ಒಟಿಟಿಯಲ್ಲಿ ಬಿಡುಗಡೆಯಾಗಿತ್ತು.
ದೃಶ್ಯಂ 3 ಬಿಡುಗಡೆಗೆ ಸಿದ್ಧವಾಗುತ್ತಿರುವ ಹಿನ್ನೆಲೆಯಲ್ಲಿ ಎರಡನೇ ಭಾಗವನ್ನು ಥಿಯೇಟರ್ನಲ್ಲಿ ಬಿಡುಗಡೆ ಮಾಡುವ ಪ್ರಯತ್ನ ಮಾಡಲಾಗಿತ್ತು. ದೃಶ್ಯಂ 2 ಸಿನಿಮಾ ಈಗಾಗಲೇ ಒಟಿಟಿಯಲ್ಲಿ ಲಭ್ಯವಿದ್ದು ಹೆಚ್ಚಿನ ಪ್ರೇಕ್ಷಕರು ಅದನ್ನು ವೀಕ್ಷಿಸಿರುವುದರಿಂದ ಥಿಯೇಟರ್ಗೆ ನೋಡಲು ಜನರು ಆಸಕ್ತಿ ತೋರಿಲ್ಲ.
ಅಲ್ಲದೇ ಕೇರಳದಲ್ಲಿ ಚುನಾವಣೆ ಕಾವು ಜೋರಾಗಿದ್ದು ಚಿತ್ರದ ಕಲೆಕ್ಷನ್ ಮೇಲೆ ಪರಿಣಾಮ ಬೀರಿದೆ.
ಆದರೆ ದೃಶ್ಯಂ 3 ಮೇಲೆ ನಿರೀಕ್ಷೆಗಳು ಹೆಚ್ಚಾಗಿದೆ. ಇದು ಒಟಿಟಿ ಮೂಲಕ ಬಿಡುಗಡೆಯಾಗಿ ಯಶಸ್ಸು ಸಾಧಿಸುವ ಸಾಧ್ಯತೆ ಇದೆ ಎಂದು ಅಂದಾಜು ಮಾಡಲಾಗಿದೆ.
—-





Be the first to comment