ನಿರ್ದೇಶಕ ಪ್ರೇಮ್ ಅವರು ನಟ ಧ್ರುವ ಸರ್ಜಾ ಜೊತೆ ಹೊಸ ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿ ಹೊರ ಬಿದ್ದಿದೆ.
ಸಿನಿಮಾ ವಿಚಾರವಾಗಿ ಪ್ರೇಮ್ ಮತ್ತು ಧ್ರುವ ಸರ್ಜಾ ನಡುವೆ ಒಂದು ಸುತ್ತಿನ ಮಾತುಕತೆ ನಡೆದಿದೆ. ಇದು ಮಾಸ್ ಕಮರ್ಷಿಯಲ್ ಸಿನಿಮಾವಾಗಿದೆ. ಈ ಪ್ರಾಜೆಕ್ಟ್ ಗೆ ದೊಡ್ಡ ನಿರ್ಮಾಣ ಸಂಸ್ಥೆಯೊಂದು ಬಂಡವಾಳ ಹೂಡಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈಗ ಧ್ರುವ ಸರ್ಜಾ ಅವರು ನಿರ್ದೇಶಕ ಎಪಿ ಅರ್ಜುನ್ ಅವರ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಮುಹೂರ್ತ ಆಗಸ್ಟ್ 15ರಂದು ನಡೆಯಲಿದೆ.
ನಿರ್ದೇಶಕ ಪ್ರೇಮ್, ಏಕ್ ಲವ್ ಯಾ ಸಿನಿಮಾದ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ರಕ್ಷಿತಾ ಈ ಚಿತ್ರದ ನಿರ್ಮಾಣ ಜವಾಬ್ದಾರಿ ವಹಿಸಿಕೊಂಡಿದ್ದು ಈ ಸಿನಿಮಾ ಮುಗಿಸಿ ಪ್ರೇಮ್, ಧ್ರುವ ಸರ್ಜಾ ಜೊತೆಗೆ ಆಕ್ಷನ್ ಸಿನಿಮಾದಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಧ್ರುವ ಸರ್ಜಾ ಅವರು ಹಲವು ಸಿನೆಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ರಾಘವೇಂದ್ರ ಹೆಗ್ಡೆ ಅವರ ನಿರ್ದೇಶನದ ಸಿನಿಮಾದ ಜೊತೆಗೆ ಎ ಹರ್ಷ ಅವರ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಎ ಪಿ ಅರ್ಜುನ್ ಸಿನಿಮಾ ಬಳಿಕ ಧ್ರುವ ಸರ್ಜಾ ಅವರು ಯಾವ ಸಿನಿಮಾದಲ್ಲಿ ನಟನೆ ಮಾಡಲಿದ್ದಾರೆ ಎಂದು ಕಾದು ನೋಡಬೇಕಿದೆ.
_____________
Be the first to comment