ಡಬ್ಬಿಂಗ್ ಮುಗಿಸಿದ ಸಂಜಯ್ ದತ್

ಬಾಲಿವುಡ್ ನಟ ಸಂಜಯ್ ದತ್ ‘ಕೆಜಿಎಫ್ 2′ ಚಿತ್ರದಲ್ಲಿ ತಮ್ಮ ಅಧೀರ ಪಾತ್ರಕ್ಕೆ ಡಬ್ಬಿಂಗ್ ಮುಗಿಸಿದ್ದಾರೆ.

ಡಬ್ಬಿಂಗ್ ಕೆಲಸ ಮುಗಿಸಿರುವ ಸಂಭ್ರಮದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಅವರು ಸಂಜಯ್ ದತ್ ಜೊತೆಗೆ ಇರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

“ಅಧೀರ ಈಸ್ ಬ್ಯಾಕ್. ಕೆಜಿಎಫ್ 2 ಚಿತ್ರದ ಅಧೀರನ ಪಾತ್ರಕ್ಕೆ ಡಬ್ಬಿಂಗ್ ಮುಗಿದಿದೆ. ದೊಡ್ಡ ಪರದೆ ಮೇಲೆ ಮುಂದಿನ ವರ್ಷ ಏಪ್ರಿಲ್ 24ಕ್ಕೆ ಸಿಗೋಣ’ ಎಂದು ಪ್ರಶಾಂತ್ ನೀಲ್ ಟ್ವೀಟ್ ಮಾಡಿದ್ದಾರೆ. ಇದು ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ಇನ್ನಷ್ಟು ಕುತೂಹಲ ಮೂಡಿಸಿದೆ.


ರಾಕಿಂಗ್ ಸ್ಟಾರ್ ಯಶ್, ಹಿಂದಿಯಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ ಎಂದು ಹೇಳಲಾಗಿದೆ. ವಿಜಯ್ ಕಿರಗಂದೂರು ನಿರ್ಮಾಣ, ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ನಟಿಸಿರುವ ಕೆಜಿಎಫ್ 2 ಪ್ಯಾನ್ ಇಂಡಿಯಾ ಸಿನಿಮಾ ಏ.24ರಂದು ಏಕಕಾಲದಲ್ಲಿ ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ.

2021ರ ಜುಲೈ 16 ಕ್ಕೆ ಕೆಜಿಎಫ್ 2 ರಿಲೀಸ್ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಕೊರೋನಾದಿಂದ ಇದು ಸಾಧ್ಯವಾಗಿರಲಿಲ್ಲ. ಕೆಜಿಎಫ್‌ 2 ಸಿನಿಮಾದ ಪ್ಯಾಚ್ ವರ್ಕ್ ಕೆಲಸ ಬಾಕಿ ಇದ್ದು, ಬೆಂಗಳೂರಿನ ನೈಸ್ ರೋಡ್‌ನಲ್ಲಿ ಮೂರು ದಿನದ ಶೂಟಿಂಗ್ ಕೆಲಸ ನಡೆಯಲಿದೆ ಎಂದು ಹೇಳಲಾಗಿದೆ. ಸದ್ಯ ನಿರ್ದೇಶಕ ಪ್ರಶಾಂತ್ ನೀಲ್ ಸಲಾರ್ ಸಿನಿಮಾದ ಶೂಟಿಂಗ್‌ನಲ್ಲಿ ನಿರತರಾಗಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!