ನಟ ದುನಿಯಾ ವಿಜಯ್ ತಂದೆ ರುದ್ರಪ್ಪ (81)ಇಂದು ನಿಧನ ಹೊಂದಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ರುದ್ರಪ್ಪ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ರುದ್ರಪ್ಪನವರು ಅಸ್ಪತೆಯಲ್ಲಿ ನಿಧನ ಹೊಂದಿದ್ದಾರೆ.
ರುದ್ರಪ್ಪ ಅವರ ಅಂತ್ಯಕ್ರಿಯೆ ಆನೇಕಲ್‌ನ ಕುಂಬಾರ ಹಳ್ಳಿಯಲ್ಲಿ ನಡೆಯಲಿದೆ ಎಂದು ಕುಟುಂಬ ವರ್ಗ ತಿಳಿಸಿದೆ.
ತಂದೆಯ ನಿಧನದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ನಟ ದುನಿಯಾ ವಿಜಯ್ ”ಮಿಸ್ ಯು ಅಪ್ಪ” ಎಂದು ನೋವಿನಿಂದ ಬರೆದುಕೊಂಡಿದ್ದಾರೆ. ದುನಿಯಾ ವಿಜಯ್ ಅವರ ತಂದೆಯ ಅಗಲಿಕೆಗೆ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ಕಳೆದ ಜುಲೈ ತಿಂಗಳಲ್ಲಿ ದುನಿಯಾ ವಿಜಯ್ ಅವರ ತಾಯಿ ನಿಧನ ಹೊಂದಿದ್ದರು. ಈಗ ಕೆಲವೇ ತಿಂಗಳ ಅಂತರದಲ್ಲಿ ವಿಜಯ್ ತಂದೆ ನಿಧನ ಹೊಂದಿದ್ದಾರೆ.
__
Be the first to comment