ಟಾಲಿವುಡ್ ಡ್ಯಾಷಿಂಗ್ ಡೈರೆಕ್ಟರ್ ಪುರಿ ಜಗನ್ನಾಥ್ ಹೊಸ ಸಿನಿಮಾದಲ್ಲಿ ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಯ್ ಕೈಜೋಡಿಸಿದ್ದಾರೆ.
ಪುರಿ ಕನೆಕ್ಟ್ಸ್ ಬ್ಯಾನರ್ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡಲಾಗುವುದು. ಪುರಿ ಜಗನ್ನಾಥ್ ಹಾಗೂ ಚಾರ್ಮಿ ಕೌರ್ ನಿರ್ಮಾಪಕರಾಗಿ ಚಿತ್ರಕ್ಕೆ ಸಾಥ್ ಕೊಡುತ್ತಿದ್ದಾರೆ.ಜೂನ್ ನಿಂದ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯುತ್ತಿದೆ.
ಹೊಸ ಸಿನಿಮಾದಲ್ಲಿ ಮೊದಲ ಬಾರಿಗೆ ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ಎಂಟ್ರಿ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಸೇತುಪತಿ ಹಿಂದೆಂದೂ ಕಾಣದ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇತ್ತೀಚೆಗೆಷ್ಟೇ ತಮಿಳು ಸಿನಿಮಾರಂಗಕ್ಕೂ ಎಂಟ್ರಿ ಕೊಟ್ಟಿರುವ ಬ್ಲಾಕ್ ಕೋಬ್ರಾ ಮತ್ತೊಮ್ಮೆ ಟಾಲಿವುಡ್ ನೆಲದಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ. ಬಾಲಯ್ಯ ನಟನೆಯ ವೀರ ಸಿಂಹ ರೆಡ್ಡಿ ಚಿತ್ರದಲ್ಲಿ ಖಳನಾಯಕನಾಗಿ ತೊಡೆ ತಟ್ಟಿದ್ದ ವಿಜಯ್ ಈಗ ಮತ್ತೊಂದು ತೆಲುಗು ಸಿನಿಮಾಗೆ ಸೈ ಎಂದಿದ್ದಾರೆ.
ಈ ಚಿತ್ರದಲ್ಲಿ ವಿಜಯ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆಂದು ಚಿತ್ರತಂಡ ಹೇಳಿದೆ. ಒಂದು ವೇಳೆ ವಿಜಯ್ ಖಳನಾಯಕನಾಗಿ ಕಾಣಿಸಿಕೊಂಡ್ರೆ ವಿಜಯ್ ವರ್ಸಸ್ ವಿಜಯ್ ಕಾಳಗ ಜೋರಾಗಿರಲಿದೆ.
—-

Be the first to comment