ಕೆಣಕಿದವರಿಗೆ ಭೀಮಾ ಉತ್ತರಿಸಿದೆ ಎಂದ ವಿಜಯ್

ನಮ್ಮನ್ನು ಕೆಣಕಿ ಹಂಗಿಸಿದವರಿಗೆ ಭೀಮ ಚಿತ್ರದ ಯಶಸ್ಸು ಉತ್ತರ ಕೊಟ್ಟಿದೆ ಎಂದು ಭೀಮಾ ಚಿತ್ರದ ನಾಯಕ ನಟ, ನಿರ್ದೇಶಕ ದುನಿಯಾ ವಿಜಯ್ ಹೇಳಿದ್ದಾರೆ.

ಎಲ್ಲರೂ ಇಂಥ ಚಿತ್ರಗಳನ್ನು ನೋಡಬೇಕು. ಮಕ್ಕಳು, ಪೋಷಕರು ಎಲ್ಲರೂ ಕೂತು ನೋಡುವ ಚಿತ್ರವಿದು ಎಂದು ಮೆಚ್ಚಿಕೊಳ್ಳುತ್ತಿದ್ದಾರೆ. ಒಳ್ಳೆಯ ವಿಚಾರ- ಸಂದೇಶ ಹೇಳುವುದಕ್ಕೆ ನಾನು ರಗಡ್ ದಾರಿಯನ್ನು ಆಯ್ಕೆ ಮಾಡಿಕೊಂಡೆ. ಇರೋ ಸಂಗತಿಗಳನ್ನು ಯಥಾವತ್ತಾಗಿ ಹೇಳಿದ್ದೇನೆ. ಭೀಮ ಚಿತ್ರದಲ್ಲಿರುವ ಕತೆ ಸಮಾಜಕ್ಕೆ ಎಚ್ಚರಿಕೆಯ ಗಂಟೆ ಎಂದಿದ್ದಾರೆ ವಿಜಯ್.

ನನಗೆ ಸ್ವತಂತ್ರವಾಗಿ ಸಿನಿಮಾ ಮಾಡುವ ಅವಕಾಶ ಕೊಟ್ಟ ನಿರ್ಮಾಪಕರಾದ ಜಗದೀಶ್‌ ಗೌಡ ಹಾಗೂ ಕೃಷ್ಣಸಾರ್ಥಕ್‌ ಅವರಿಗೆ ಋಣಿಯಾಗಿದ್ದೇನೆ. ಈ ಚಿತ್ರವನ್ನು ಎಲ್ಲರೂ ನೋಡಬೇಕು. ಅದರಲ್ಲೂ ಈ ಸಿನಿಮಾ ನೋಡಿದ ಮೇಲೆ ಈ ಚಿತ್ರದಲ್ಲಿ ನಾನು ಹೇಳಲು ಹೊರಟಿರುವ ವಿಚಾರದ ಮೇಲೆ ಮಾಧ್ಯಮಗಳು ಹೆಚ್ಚು ಬೆಳಕು ಚೆಲ್ಲುವ ಮೂಲಕ ಸರ್ಕಾರದ ಗಮನ ಸೆಳೆದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಸೆನ್ಸಾರ್‌ನಿಂದ ಎ ಸರ್ಟಿಫಿಕೇಟ್‌ ನೀಡಿದ್ದಾರೆ. ಆದರೂ ಎಲ್ಲಾ ವಯಸ್ಸಿನವರು ನೋಡಬೇಕಾದ ಕತೆ ಈ ಚಿತ್ರದಲ್ಲಿದೆ. ವಿದ್ಯಾರ್ಥಿಗಳು, ಹದಿಹರೆಯದವರು, ಅದರಲ್ಲೂ ಹೆಣ್ಣು ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಮಾಡಿರುವ ಸಿನಿಮಾ ಇದು ಎಂದು ವಿಜಿ ಹೇಳಿದ್ದಾರೆ.

ನಿರ್ಮಾಪಕ ಕೃಷ್ಣಸಾರ್ಥಕ್, ಜಗದೀಶ್ ಗೌಡ, ‘ಪ್ರೀ ರಿಲೀಸ್‌ ಬಿಸಿನೆಸ್‌ ಇಲ್ಲದೆ ಇರುವ ಹೊತ್ತಿನಲ್ಲಿ ರಿಸ್ಕ್‌ನಲ್ಲಿ ಪ್ರೇಕ್ಷಕರ ಮೇಲೆ ನಂಬಿಕೆ ಇಟ್ಟು ನಮ್ಮ ಚಿತ್ರವನ್ನು ಬಿಡುಗಡೆ ಮಾಡಿದ್ದೆವು. ಆ ನಂಬಿಕೆ ಈಗ ನಿಜವಾಗಿದೆ. ನಮ್ಮ ಚಿತ್ರದ ಓಟಿಟಿ, ಟೀವಿ ಹಕ್ಕು ಯಾವುದೇ ವ್ಯಾಪಾರ ಆಗಿಲ್ಲ. ಚಿತ್ರಮಂದಿರ ನಂಬಿಕೊಂಡು ಸಿನಿಮಾ ಮಾಡಿದರೆ ಗೆದ್ದೇ ಗೆಲ್ಲುತ್ತೇವೆ ಎಂಬುದು ಸಾಬೀತಾಗಿದೆ. ಹಿಂದಿನಂತೆ ಈಗ ಚಿತ್ರಮಂದಿರಗಳನ್ನೇ ನಂಬಿಕೊಂಡು ಸಿನಿಮಾ ಮಾಡಬೇಕಿದೆ’ ಎಂದರು.

ಈ ವೇಳೆ ಸಂಭಾಷಣೆಕಾರ ಮಾಸ್ತಿ, ಸಂಗೀತ ನಿರ್ದೇಶಕ ಚರಣ್‌ ರಾಜ್‌, ನಾಯಕಿ ಅಶ್ವಿನಿ, ಪ್ರಮುಖ ಪಾತ್ರಧಾರಿಗಳಾದ ಡ್ರ್ಯಾಗನ್‌ ಮಂಜು, ಪ್ರಿಯಾ ಷಟಮರ್ಶನ, ನಯನಾ ಸೂಡ, ಜಯಸೂರ್ಯ, ಆಂಟೋನಿ, ನೃತ್ಯ ನಿರ್ದೇಶಕ ಧನು, ಸಾಹಸ ನಿರ್ದೇಶಕ ಶಿವು ಇದ್ದರು.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!